ಬಿಆರ್‌ಎಸ್‌ ಯುವ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

ಹೈದರಾಬಾದ್‌: ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು.
ಹೈದರಾಬಾದ್‌ನ ಔಟರ್‌ ರಿಂಗ್‌ ರೋಡ್‌ನಲ್ಲಿ ನಂದಿತಾ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

10 ದಿನಗಳ ಹಿಂದೆ, ಶಾಸಕಿ ನಾರ್ಕಟ್‌ಪಲ್ಲಿ ಅಪಘಾತದಲ್ಲಿ ಅಪಾಯದಿಂದ ಪಾರಾಗಿದ್ದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾಷಣ ಮಾಡುತ್ತಿದ್ದ ರ್ಯಾಲಿಗೆ ತೆರಳುತ್ತಿದ್ದ ವೇಳೆ ಪಾನಮತ್ತ ಚಾಲಕನೊಬ್ಬ ಆಕೆಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಲ್ಲಿ ಆಕೆಯ ಹೋಮ್ ಗಾರ್ಡ್ ಮೃತಪಟ್ಟಿದ್ದು, ಶಾಸಕಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಲಾಸ್ಯ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್‌ (ಪ.ಜಾತಿ) ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು.
1986 ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದ ಲಾಸ್ಯ ನಂದಿತಾ ಸುಮಾರು ಒಂದು ದಶಕದ ಹಿಂದೆ ರಾಜಕೀಯಕ್ಕೆ ಕಾಲಿಟ್ಟರು. 2023 ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಶಾಸಕರಾಗಿ ಆಯ್ಕೆಯಾಗುವ ಮೊದಲು ಅವರು ಕವಾಡಿಗುಡ ವಾರ್ಡ್‌ನಲ್ಲಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement