ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾದ ಮುದ್ದಹನುಮೇಗೌಡ : ಅಸಮಾಧಾನ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಸಚಿವರಾದ ಕೆ.ಎನ್‌. ರಾಜಣ್ಣ, ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಡಾ.ರಂಗನಾಥ್‌, ಕೆ.ವೈ.ನಂಜೇಗೌಡ ಮೊದಲಾದವರು ಉಪಸ್ಥಿತರಿದ್ದರು.
ಆದರೆ ಮುದ್ದಹನುಮೇಗೌಡ ಪಕ್ಷ ಸೇರ್ಪಡೆ ಕಾರ್ಯಕ್ರಮದಿಂದ ತುಮಕೂರಿನ ಕೆಲ ಹಿರಿಯ ನಾಯಕರು ದೂರ ಉಳಿದಿದ್ದರು. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಕೆ.ಷಡಕ್ಷರಿ, ಮಾಜಿ ಶಾಸಕ ಡಿ.ಸಿ.ಗೌರಿಶಂಕರ ಗೈರು ಹಾಜರಾಗಿದ್ದು, ಮುದ್ದಹನುಮೇಗೌಡರು ಮರಳಿ ಬಂದಿದ್ದಕ್ಕೆ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ನಂತರ ಮಾತನಾಡಿದ ಮುದ್ದುಹನುಮೇ ಗೌಡ ಅವರು, ʻನಾನು ಪಕ್ಷಾಂತರ ಮಾಡಿದ್ದಕ್ಕೆ ನನಗೆ ಮುಜುಗರ ಆಗಿದೆ. ಚುನಾವಣೆಗೆ ಸ್ಪರ್ಧೆ ಮಾಡಲು ಪಕ್ಷಾಂತರ ಮಾಡಿದ್ದೆ. ಈಗ ತಪ್ಪಿನ ಅರಿವಾಗಿ ಕಾಂಗ್ರೆಸ್ಸಿಗೆ ಮರಳಿ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿಯೇ ನನ್ನ ಮುಂದಿನ ಸಾರ್ವಜನಿಕ ಬದುಕು ಎಂದು ಹೇಳಿದರು.

ಪ್ರಮುಖ ಸುದ್ದಿ :-   ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement