ಯರಗಟ್ಟಿ :ಕಾರುಗಳ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ಮೂವರ ಸಾವು

ಬೆಳಗಾವಿ: ಸ್ವಿಫ್ಟ್‌ ಮತ್ತು ಅಲ್ಟೋ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಶುಕ್ರವಾರ ನಡೆದಿದ್ದು, ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ(8), ಗೋಪಾಲ ನಾಯಕ(45) ಹಾಗೂ ಧಾರವಾಡ ಮೂಲದ ಅನ್ನಪೂರ್ಣ(53) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮುರಗೋಡ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement