1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ದ್ವಿತೀಯ ಪಿಯು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಅರ್ಹರಿಂದ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
ಶೈಕ್ಷಣಿಕವಾಗಿ ಅರ್ಹತೆ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗೆ ಹಾಜರಾಗಬೇಕು.
ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು : ಗ್ರಾಮ ಆಡಳಿತ ಅಧಿಕಾರಿ (VA – ಗ್ರಾಮ ಲೆಕ್ಕಿಗ)
ಹುದ್ದೆಗಳ ಸಂಖ್ಯೆ : 1000
ಮಾಸಿಕ ವೇತನ : .21400-42000 ರೂ.
ಪಿಂಚಣಿ ಸೌಲಭ್ಯ : ಪಿಂಚಣಿ ರಹಿತ (ಎನ್‌ಪಿಎಸ್‌).
ಸ್ಥಳ: ಕರ್ನಾಟಕ ವ್ಯಾಪ್ತಿ
ವೆಬ್‌ಸೈಟ್‌ ವಿಳಾಸ;https://cetonline.karnataka.gov.in/kea/indexnew 

ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು. ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ / ಎನ್‌ಐಓಎಸ್‌ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಪಡೆದಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್‌ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.
ವಯೋಮಿತಿ: ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750. ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂ.ಗಳು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಪ್ರಮುಖ ದಿನಾಂಕಗಳು
ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಕೆ ಆರಂಭ : 04-03-2024
ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-04-2024
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ : 06-04-2024
ಅಧಿಸೂಚನೆಗಾಗಿ gazette_notification_VAkannada    ಇಲ್ಲಿ ಕ್ಲಿಕ್‌ ಮಾಡಬಹುದು
ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಹೊರತುಪಡಿಸಿ ಇತರೆ ಮಾದರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿ ಲಿಂಕ್‌ ಅನ್ನು ಮಾರ್ಚ್ 4 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಕ್ರಿಯ ಮಾಡಲಿದ್ದು, ನಂತರ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರಲಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement