ನಕಲಿ ಲೋಕಸಭಾ ಚುನಾವಣಾ ವೇಳಾಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ; ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ

ನವದೆಹಲಿ : 2024ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶವೊಂದು ಹರಿದಾಡುತ್ತಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ ಹೇಳಿದೆ.
X ನಲ್ಲಿನ ಪೋಸ್ಟ್‌ನಲ್ಲಿ, ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ 2024 ರ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್‌ (WhatsApp)ನಲ್ಲಿ ನಕಲಿ ಸಂದೇಶ ಹಂಚಿಕೊಳ್ಳಲಾಗುತ್ತಿದೆ ಈ ಸಂದೇಶವು ನಕಲಿಯಾಗಿದೆ. #ಚುನಾವಣಾ ಆಯೋಗದಿಂದ ಇದುವರೆಗೆ ಯಾವುದೇ ದಿನಾಂಕಗಳನ್ನು ಘೋಷಿಸಲಾಗಿಲ್ಲ ಎಂದು ಹೇಳಿದೆ.
ಕೆಲವು ಕಿಡಿಗೇಡಿಗಳು ಈಗಲೇ ಸುಳ್ಳು ಮಾಹಿತಿಗಳನ್ನು ಸೃಷ್ಟಿಸಿ ಹರಡುತ್ತಿರುವ ಮೂಲಕ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಚುನಾವಣಾ ಆಯೋಗವು ಮಾರ್ಚ್ 12ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 19ರಿಂದ ಚುನಾವಣೆ ನಡೆಯಲಿದೆ ಹಾಗೂ ಮೇ 22ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂಬ ಸುದ್ದಿ ಹರಡಿದೆ. ಮಾರ್ಚ್ 28ರಂದು ಚುನಾವಣಾ ನಾಮಪತ್ರ ಸಲ್ಲಿಕೆ ಕಾರ್ಯ ಶುರುವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಹೆಸರಿನಲ್ಲಿ ನಕಲಿ ನೋಟಿಸ್ ಅನ್ನು ಸೃಷ್ಟಿಸಲಾಗಿದೆ.
2024ರ ಲೋಕಸಭೆ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್‌ನಲ್ಲಿ ಸುಳ್ಳು ಸಂದೇಶ ಹರಡಲಾಗುತ್ತಿದೆ. ಈ ಸಂದೇಶವು ನಕಲಿ. ಚುನಾವಣಾ ಆಯೋಗವು ಈವರೆಗೂ ಯಾವುದೇ ದಿನಾಂಕ ಪ್ರಕಟಿಸಿಲ್ಲ. ಚುನಾವಣಾ ಆಯೋಗವು ಸುದ್ದಿಗೋಷ್ಠಿ ನಡೆಸುವ ಮೂಲಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ ಎಂದು ಆಯೋಗವು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸ್ಪಷ್ಟನೆ ನೀಡಿದೆ.

ಪ್ರಮುಖ ಸುದ್ದಿ :-   ಬಿಜೆಪಿಯ ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್

ಚುನಾವಣಾ ಆಯೋಗವು ಮತದಾನದ ದಿನಾಂಕ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ, ನಾಮಪತ್ರಗಳ ಪರಿಶೀಲನೆ ಹಾಗೂ ಫಲಿತಾಂಶದ ದಿನಾಂಕಗಳನ್ನು ಪ್ರಕಟಿಸುವುದಕ್ಕೂ ಮುನ್ನ ಪ್ರತಿ ರಾಜ್ಯದಲ್ಲಿಯೂ ಅದಕ್ಕೆ ಅಗತ್ಯವಾದ ತಯಾರಿ ನಡೆಯಬೇಕಿದೆ. ತಯಾರಿ ಪೂರ್ಣಗೊಂಡ ಬಳಿಕ ಆಯೋಗವು ಚುನಾವಣಾ ದಿನಾಂಕ ಪ್ರಕಟಿಸುತ್ತದೆ. ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಆಯೋಗ ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement