ನಾಲ್ಕು ರಾಜ್ಯಗಳಲ್ಲಿ ಎಎಪಿ – ಕಾಂಗ್ರೆಸ್‌ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ನವದೆಹಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ದೆಹಲಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಎಎಪಿ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯ 7 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಹಾಗೂ ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಜೊತೆಗೆ ಗುಜರಾತ್‌, ಹರಿಯಾಣ, ಗೋವಾ ಹಾಗೂ ಚಂಡೀಗಢದಲ್ಲಿ ಸೀಟು ಹಂಚಿಕೆ ಅಂತಿಮಗೊಂಡಿದೆ.
ದೆಹಲಿಯಲ್ಲಿ ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ, ಪೂರ್ವ ದೆಹಲಿ ಹಾಗೂ ನವದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ. ಮೂರು ಕ್ಷೇತ್ರಗಳಾದ ಈಶಾನ್ಯದೆಹಲಿ, ವಾಯುವ್ಯ ದೆಹಲಿ ಹಾಗೂ ಚಾಂದಿನ ಚೌಕ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.
ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌ ಹಾಗೂ ಎಎಪಿ ನಾಯಕರು ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಗುಜರಾತ್‌ನ 26 ಕ್ಷೇತ್ರಗಳ ಪೈಕಿ ಭರುಚ್‌ ಮತ್ತು ಭಾವನಗರ ಎರಡು ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸಲಿದೆ. ಉಳಿದ 24 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಹಾಗೂ ಹರಿಯಾಣದ 10 ಕ್ಷೇತ್ರಗಳ ಪೈಕಿ ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷ ಸ್ಪರ್ಧಿಸಲಿದ್ದು, ಉಳಿದ ಒಂಬತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಗೋವಾದ ಎರಡು ಕ್ಷೇತ್ರಗಳು ಹಾಗೂ ಚಂಡೀಗಢದ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ ..| ʼರಾಮಲೀಲಾʼ ಪ್ರದರ್ಶನದ ವೇಳೆ ಅಭಿನಯಿಸುತ್ತಿದ್ದಾಗಲೇ ಹೃದಯಾಘಾತದಿಂದ ರಾಮನ ಪಾತ್ರಧಾರಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement