ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ; ಅಂಧ ದಂಪತಿ ಸಾವು

ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿಯಾಗಿ ಅಂಧ ದಂಪತಿ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನೆಲಮಂಗಲದ ಬಳಿ ನಡೆದಿದೆ.
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಶ್ರೀಧರ (52) ಹಾಗೂ ಅರ್ಚನಾ (35) ಎಂದು ಗುರುತಿಸಲಾಗಿದೆ.
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್​ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ವೇಗ ಇದ್ದಿದ್ದರಿಂದ ಅಪಘಾತ ನಡೆದ ಸ್ಥಳದಿಂದ ಸುಮಾರು 100 ಮೀಟರ್ ವರೆಗೆ ಎಳೆದೊಯ್ದ ನಂತರ ಬೈಕ್ ಸಮೇತ ಸವಾರ ಚರಂಡಿಗೆ ಬಿದ್ದಿದ್ದಾನೆ.
ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement