ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಬೆಂಗಲೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜಾ ವೆಂಕಟಪ್ಪ ನಾಯಕ ಅವರು ಇಬ್ಬರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರು 1,13,559 ಮತಗಳನ್ನು ಪಡೆದು ಜಯಗಳಿಸಿದ್ದರು.
ಸುರಪುರ ವಿಧಾನಸಭೆ ಕ್ಷೇತ್ರದ ಎಸ್ ಟಿ ಮೀಸಲು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾ ವೆಂಕಟಪ್ಪ ನಾಯಕ. ಅವರು 1994, 1999, 2013, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 10 ದಿನದ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೊದಲು ಲಿವರ್ ಸಮಸ್ಯೆಯಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯದ ತೊಂದರೆ ಸಹ ಕಾಣಿಸಿಕೊಂಡಿತ್ತು. 4 ದಿನದ ಹಿಂದೆ ವಾರ್ಡ್‌ನಿಂದ ಅವರನ್ನು ಐಸಿಯುಗೆ ದಾಖಲು ಮಾಡಲಾಗಿತ್ತು. ಮಂಗಳವಾರ ನಡೆಯುವ ರಾಜ್ಯಸಭಾ ಚುನಾವಣೆಗೆ ಮತದಾನ ಮಾಡಲು ಅಂಬ್ಯುಲೆನ್ಸ್‌ನಲ್ಲಿ ಕರೆತಂದು ಪುತ್ರನ ಜೊತೆ ಬಂದು ಮತದಾನ ಮಾಡಲು ಅನುಮತಿ ಪಡೆಯಲಾಗಿತ್ತು ಎಂದು ಹೇಳಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ವೆಂಕಟಪ್ಪ ನಾಯಕ ಅವರು ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪಕ್ಷ ಕಟ್ಟಲು ಶಕ್ತಿ ಮೀರಿ ಶ್ರಮಿಸಿದ್ದಾರೆ.
ಸೋಮವಾರ (ಫೆ. 26) ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಸ್ವಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ