ಜಾರ್ಖಂಡದಲ್ಲಿ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ಏಕೈಕ ಸಂಸದೆ ಬಿಜೆಪಿಗೆ ಸೇರ್ಪಡೆ

ರಾಂಚಿ: ಜಾರ್ಖಂಡ್‌ನ ಸಿಂಗ್‌ಭೂಮ್ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಅವರು ಸೋಮವಾರ ಇಲ್ಲಿನ ರಾಜ್ಯ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ. ಗೀತಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು.
ನಾನು ಬಿಜೆಪಿ ಸೇರಿದ್ದೇನೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುವ ಮೂಲಕ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಾಂಗ್ರೆಸ್‌ ಪಕ್ಷ ಎಲ್ಲರನ್ನೂ ಕರೆದುಕೊಂಡು ಹೋಗುವುದಾಗಿ ಹೇಳುತ್ತದೆ. ಆದರೆ ಅದುಒಂದು ಕುಟುಂಬವನ್ನು ಮಾತ್ರ ಮುಂದಕ್ಕೆ ಕರೆದುಕೊಂಡು ಹೋಗುತ್ತದೆ” ಎಂದು ಅವರು ಹೇಳಿದರು.
2019ರ ಲೋಕಸಭೆ ಚುನಾವಣೆಯಲ್ಲಿ ಜಾರ್ಖಂಡ್‌ನ 14 ಸಂಸದೀಯ ಸ್ಥಾನಗಳ ಪೈಕಿ ಬಿಜೆಪಿ-ಎಜೆಎಸ್‌ಯು ಮೈತ್ರಿಕೂಟ 12ರಲ್ಲಿ ಗೆಲುವು ಸಾಧಿಸಿತ್ತು.
ಎರಡು ದಿನಗಳ ಹಿಂದೆ ತಮಿಳುನಾಡಿನ ಶಾಸಕಿ ಎಸ್‌.ವಿಜಯಧರಣಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಈಗ ಜಾರ್ಖಂಡದ ಏಕೈಕ ಕಾಂಗ್ರೆಸ್‌ ಸಂಸದೆ ಗೀತಾ ಕೋಡಾ ಅವರು ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement