ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಕಾರವಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮುಂಡಗೋಡ ತಾಲೂಕಿನ ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಅಲ್ಲದೆ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಎಂದು ಕರೆದಿದ್ದರು.
ಧಾರ್ಮಿಕ, ಸಾಮಾಜಿಕವಾಗಿ ಅಪಮಾನಕರ ಮಾತುಗಳನ್ನಾಡಿರುವ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೆ ಕುಮಟಾದಲ್ಲಿ ನಡೆದಿದ್ದ ಸಭೆಯಲ್ಲಿಯೂ ಅನಂತಕುಮಾರ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement