1ನೇ ತರಗತಿಗೆ ಪ್ರವೇಶ ಪಡೆಯಲು ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸೂಚನೆ

ನವದೆಹಲಿ : ಕೇಂದ್ರ ಶಿಕ್ಷಣ ಸಚಿವಾಲಯವು 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಬೇಕಾದ ವಯಸ್ಸಿನ ಅರ್ಹತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ನಿರ್ದೇಶನ ಪತ್ರ ಹೊರಡಿಸಿದೆ.
2024-25ರ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷ ವಯಸ್ಸನ್ನು ನಿಗದಿಪಡಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (RTE) ಕಾಯ್ದೆಯ 2009 ರ ನಿಬಂಧನೆಗಳ ಪ್ರಕಾರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಂಟಿ ಕಾರ್ಯದರ್ಶಿ ಅರ್ಚನಾ ಶರ್ಮಾ ಅವಸ್ತಿ ಅವರು, 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ 6+ ವರ್ಷ ಕಡ್ಡಾಯವಾಗಿ ಆಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು, ಎನ್‌ಇಪಿ 2020 ಪ್ರಕಾರ, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ 2009 ರ ಪ್ರಕಾರ ಈ ಕುರಿತು ವಿಶೇಷ ಗಮನಹರಿಸಿ ಎಂದು ಶಿಕ್ಷಣ ಸಂಸ್ಥೆಗಳಿಗೆ ಸಹ ನಿರ್ದೇಶಿಸಿದೆ.

ಪ್ರಮುಖ ಸುದ್ದಿ :-   ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಶವವಾಗಿ ಪತ್ತೆ

2024-25ರ ಶಾಲಾ ಪ್ರವೇಶಾತಿಗಳಿಗೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ನಿಮ್ಮ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಯಸ್ಸನ್ನು ಈಗ ಗ್ರೇಡ್ I ಪ್ರವೇಶ ಪಡೆಯಲು ಮಕ್ಕಳ ವಯಸ್ಸು 6+ ಎಂದು ನಿಗದಿಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಂಟಿ ಕಾರ್ಯದರ್ಶಿ ಅರ್ಚನಾ ಶರ್ಮಾ ಅವಸ್ತಿಯವರ ಪತ್ರವು ಹೇಳುತ್ತದೆ.
ಶಿಕ್ಷಣ ಸಚಿವಾಲಯದ ಅಧೀನದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳಿಗೆ ಈ ಹಿಂದೆಯೇ ಈ ಕುರಿತು ಪತ್ರ ಹೊರಡಿಸಲಾಗಿತ್ತು. ಜತೆಗೆ ರಾಜ್ಯಗಳನ್ನು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಈ ಸೂಚನೆಗಳನ್ನು ಅನುಸರಿಸಲು ಹೇಳಲಾಗಿತ್ತು. ಕಳೆದ ವರ್ಷವು ಸಹ ಈ ಲೆಟರ್ ಅನ್ನು ಶಿಕ್ಷಣ ಸಚಿವಾಲಯ ಹೊರಡಿಸಿತ್ತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ ಅಮೆರಿಕದ ರಾಜಕೀಯ ವಿಜ್ಞಾನಿ; ಅವರ ಪ್ರಕಾರ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು ಗೊತ್ತೆ..?

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement