384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ಅಧಿಸೂಚನೆ

ಬೆಂಗಳೂರು : 2023–24 ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿ ಡಾ. ರಾಕೇಶಕುಮಾರ ಕೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈದರ್‌ಬಾದ್‌ ಕರ್ನಾಟಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ 225 ಹುದ್ದೆಗಳಿವೆ. ಒಟ್ಟು 77 ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿವೆ.
ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನವಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಕನಿಷ್ಠ 21 ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 38 ಆಗಿದೆ, ಪ್ರವರ್ಗ 2ಎ, 2ಬಿ,3ಎ, 3ಬಿಗಳಿಗೆ 41 ವರ್ಷ , ಎಸ್ಸಿ, ಎಸ್ಟಿ, ಪ್ರವರ್ಗ –1 ಅಭ್ಯರ್ಥಿಗಳಿಗೆ 43 ವರ್ಷಗಳ ವರೆಗೆ ವಯೋಮಿತಿ ಇದೆ.
ಪೂರ್ವ ಭಾವಿ ಪರೀಕ್ಷೆ (ಬಹುಆಯ್ಕೆ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ಈ ನೇಮಕಾತಿ ನಡೆಯಲಿದೆ. ವಿವರವಾದ ಅಧಿಸೂಚನೆಗೆ kpsc.kar.nic.in ವೈಬ್‌ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement