ರಾಜ್ಯಸಭೆ ಚುನಾವಣೆ : ಕರ್ನಾಟಕದ 4 ಸ್ಥಾನಗಳಲ್ಲಿ ಕಾಂಗ್ರೆಸ್‌ 3, ಬಿಜೆಪಿ 1ರಲ್ಲಿ ಗೆಲುವು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದ್ದು. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಲ್ಲಿ ಕಾಂಗ್ರೆಸ್ಸಿನ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಅವರು ಸೋತಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿಗಳಾದ ಅಜಯ ಮಾಕನ್ -47 ಮತಗಳು, ನಾಸೀರ್ ಹುಸೇನ್ – 47 ಮತಗಳು, ಜಿ.ಸಿ. ಚಂದ್ರಶೇಖರ – 45 ಮತಗಳು ಹಾಗೂ ನಾರಾಯಣಸಾ ಭಾಂಡಗೆ – 48 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ, ಕುಪೇಂದ್ರ ರೆಡ್ಡಿ – 35 ಮತಗಳನ್ನು ಗಳಿಸಿ ಸೋಲನುಭವಿಸಿದ್ದಾರೆ.
ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ.
ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ ಅವರು ಕಾಂಗ್ರೆಸ್ಸಿಗೆ ಅಡ್ಡ ಮತದಾನ ಮಾಡಿದರೆ ಮತ್ತೋರ್ವ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಮತದಾನ ಚಟುವಟಿಕೆಯಿಂದ ದೂರ ಉಳಿದು ಬಿಜೆಪಿಗೆ ಶಾಕ್‌ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬಿಜೆಪಿ ಶಾಸಕ ಸುರೇಶಕುಮಾರ್ ಮೊದಲಿಗರಾಗಿ ಬಂದು ಮತ ಚಲಾಯಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಹುತೇಕ ಶಾಸಕರು ಮಧ್ಯಾಹ್ನ 2 ರ ಹೊತ್ತಿಗೆ ಮತ ಚಲಾಯಿಸಿದ್ದರು. ಹನೂರು ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ಆರ್‌. ಮಂಜುನಾಥ ಕೊನೆಯವರಾಗಿ ಮತ ಚಲಾಯಿಸಿದರು.
ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಬೇಕಿದೆ.
ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡ ಜಿ.ಪಾಟೀಲ ಮಾತನಾಡಿ, ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಶಾಸಕ ಎಸ್.ಟಿ.ಸೋಮಶೇಖರ ಅಡ್ಡ ಮತದಾನ ಮಾಡಿರುವುದು ದೃಢಪಟ್ಟಿದೆ. ಏನು ಮಾಡಬಹುದು ಮತ್ತು ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ನಾವು ಚರ್ಚಿಸುತ್ತಿದ್ದೇವೆ” ಎಂದು ಅವರು ಹೇಳಿದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement