ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು ಎನ್ನಲಾಗಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ ಶಿವರಾಮ್ ಅವರಿಗೆ ಡಯಾಲಿಸಿಸ್ ಕೂಡ ಮಾಡಲಾಗುತ್ತಿತ್ತು. ಮಂಗಳವಾರ (ಫೆಬ್ರವರಿ 28) ಶಿವರಾಮ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಕೆ ಶಿವರಾಮ ಅವರು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾದರು. ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೆ ಶಿವರಾಮ 1993 ರಲ್ಲಿ ತೆರೆಗೆ ಬಂದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ಅಭಿನಯಿಸಿದರು. ಈ ಚಿತ್ರ ಕೆ ಶಿವರಾಮ ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತು. ನಂತರ ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.
ಸೇವೆಯಿಂದ ನಿವೃತ್ತಿಗೊಂಡ ಬಳಿಕ 2013 ರಲ್ಲಿ ಕೆ ಶಿವರಾಮ ರಾಜಕೀಯಕ್ಕೆ ಪ್ರವೇಶಿಸಿದ್ದರು. ಆರಂಭದಲ್ಲಿ ಕಾಂಗ್ರೆಸ್ ಸೇರಿದ ಅವರು 2014ರಲ್ಲಿ ಜೆಡಿಎಸ್‌ ಪಕ್ಷ ಸೇರಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು, ಆದರೆ ಸೋತಿದ್ದರು. ಬಳಿಕ ಅದೇ ವರ್ಷ ಕೆ ಶಿವರಾಮ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದರು. ನಂತರದಲ್ಲಿ ಕೆ ಶಿವರಾಮ ಬಿಜೆಪಿ ಸೇರಿದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 11 ಕಡೆ ಎನ್‌ಐಎ ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement