ತನಿಖೆಯಲ್ಲಿ ಪಾಕ್ ಪರ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಂಗಳವಾರ ನೂತನ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.
ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ವೀಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವೀಡಿಯೊ ತುಣುಕುಗಳನ್ನು ವಿಧಿವಿಜ್ಞಾನ ಪ್ರಯೋಗಾಯಕ್ಕೆ ಕಳುಹಿಸಲಾಗಿದೆ. ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಘಟನೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಬುಧವಾರ ಬೆಳಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement