ಲೋಕಪಾಲದ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ ನೇಮಕ

ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದ ಸುಮಾರು 19 ತಿಂಗಳ ನಂತರ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಪಾಲದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸುಮಾರು ಎರಡು ವರ್ಷಗಳಿಂದ ಹುದ್ದೆ ಖಾಲಿ ಇತ್ತು.
ನ್ಯಾಯಮೂರ್ತಿ ಅಜಯ ಮಾಣಿಕ್‌ ರಾವ್‌ ಖಾನ್ವಿಲ್ಕರ್ ಅವರನ್ನು ಲೋಕಪಾಲ್ ಅಧ್ಯಕ್ಷರನ್ನಾಗಿ ನೇಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ” ಎಂದು ರಾಷ್ಟ್ರಪತಿ ಭವನ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ನ್ಯಾಯಮೂರ್ತಿ ಖಾನ್ವಿಲ್ಕರ ಅವರು ಆರು ವರ್ಷಗಳ ಕಾಲ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿದ್ದರು. ಸರ್ಕಾರವು ಮೂವರು ನ್ಯಾಯಾಂಗ ಸದಸ್ಯರು ಸೇರಿದಂತೆ ಆರು ಸದಸ್ಯರನ್ನು ಲೋಕಪಾಲಕ್ಕೆ ನೇಮಿಸಿದೆ. ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಲಿಂಗಪ್ಪ ನಾರಾಯಣ ಸ್ವಾಮಿ, ಅಲಹಾಬಾದ್ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸಂಜಯ ಯಾದವ್ ಮತ್ತು ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ಕಾನೂನು ಆಯೋಗದ ಅಧ್ಯಕ್ಷರಾದ ರಿತು ರಾಜ ಅವಸ್ತಿ ಅವರು ಲೋಖಪಾಲದ ನ್ಯಾಯಾಂಗ ಸದಸ್ಯರಾಗಿದ್ದಾರೆ.

ನ್ಯಾಯಾಂಗೇತರ ಸದಸ್ಯರಲ್ಲಿ ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುಶೀಲಚಂದ್ರ, ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಪಂಕಜಕುಮಾರ ಮತ್ತು ಮಾಜಿ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಅಜಯ್ ಟಿರ್ಕಿ ಸೇರಿದ್ದಾರೆ.
ಲೋಕಪಾಲ ಅಧ್ಯಕ್ಷರು ಮತ್ತು ಸದಸ್ಯರನ್ನು ಐದು ವರ್ಷಗಳ ಅವಧಿಗೆ ನೇಮಕ ಮಾಡಲಾಗುತ್ತದೆ ಅಥವಾ ಅವರು 70 ವರ್ಷ ವಯಸ್ಸಿನವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿ ವರೆಗೆ ಸೇವೆ ಸಲ್ಲಿಸುತ್ತಾರೆ. ಮೊದಲ ಲೋಕಪಾಲ ಮುಖ್ಯಸ್ಥರಾಗಿದ್ದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್‌ ಅವರು ಮಾರ್ಚ್ 2019 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಮೇ 2022 ರಲ್ಲಿ ಅವರ ನಿವೃತ್ತಿಯ ನಂತರ, ಜಾರ್ಖಂಡ್ ಹೈಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ಪ್ರದೀಪಕುಮಾರ ಮೊಹಂತಿ ಅವರು ಹಾಲಿ ಲೋಕಪಾಲ ಅಧ್ಯಕ್ಷರಾಗಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ನ್ಯಾಯಮೂರ್ತಿ ಅವಸ್ತಿ ಅವರನ್ನು ನವೆಂಬರ್ 2022 ರಲ್ಲಿ 22 ನೇ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಸಮಿತಿಯ ಅಧಿಕಾರಾವಧಿಯು ಆಗಸ್ಟ್ 2024 ರಲ್ಲಿ ಕೊನೆಗೊಳ್ಳುತ್ತದೆ.
1980 ರ ಬ್ಯಾಚ್‌ನ ನಿವೃತ್ತ IRS (ಆದಾಯ ತೆರಿಗೆ) ಅಧಿಕಾರಿ ಸುಶೀಲಚಂದ್ರ ಅವರು ಫೆಬ್ರವರಿ 2019 ರಲ್ಲಿ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಮೊದಲು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು ಮತ್ತು ನಂತರ ಏಪ್ರಿಲ್ 2021 ರಿಂದ ಮೇ 2022 ರವರೆಗೆ ಚುನಾವಣಾ ಆಯೋಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು.
ನ್ಯಾಯಮೂರ್ತಿ ಸ್ವಾಮಿ ಮೂಲತಃ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು. ಐದು ತಿಂಗಳ ಸಂಕ್ಷಿಪ್ತ ಅವಧಿಗೆ, ಅವರು 2019 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕವಾಗಿದ್ದರು.

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement