ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.
ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶದ ಆಧಾರದ ಮೇಲೆ ಸಿದ್ಧಪಡಿಸಲಾದ ವರದಿಯನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು
ಮಧ್ಯಾಹ್ನ ವಿಧಾನಸೌಧಕ್ಕೆ ಎರಡು ಬಾಕ್ಸ್ ವರದಿ ಪ್ರತಿಗಳ ಜೊತೆಗೆ ಆಗಮಿಸಿದ ಜಯಪ್ರಕಾಶ್ ಹೆಗ್ಡೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ತೆರಳಿ ವರದಿಯ ಪ್ರತಿಯನ್ನು ಹಸ್ತಾಂತರಿಸಿದರು.
ವರದಿ ಸ್ವೀಕಾರ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ವರದಿಯಲ್ಲಿ ಏನಿದೆ ಎಂದು ನೋಡಿಲ್ಲ. ಕ್ಯಾಬಿನೆಟ್ನಲ್ಲಿ ಜಾತಿಗಣತಿ ವರದಿ ಚರ್ಚೆ ಮಾಡುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳತ್ತೇವೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಮಾತನಾಡಿ, ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ವರದಿ ಸಿದ್ಧಪಡಿಸಲಾಗಿದೆ. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ಇದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಲಾಗಿದೆ. ನಾವು ಸಿದ್ಧಪಡಿಸಿದ ಜಾತಿ ಗಣತಿಯ ವರದಿ ಸೋರಿಕೆಯಾಗಿಲ್ಲ ಎಂದರು.
ಜಾತಿ ಗಣತಿ ವರದಿಯಲ್ಲಿ ಏನೇನಿದೆ?
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ಈ ವರದಿಯು ಒಳಗೊಂಡಿದೆ.
ಜಾತಿಗಣ ವರದಿಯಲ್ಲಿರುವ ಅಂಶಗಳು
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಸಮಗ್ರ ರಾಜ್ಯ ವರದಿ, ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ), ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಜಾತಿಗಳು). ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಪಂಗಡಗಳು), ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (ಎರಡು ಸಿಡಿಗಳು)
ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 2015 ರ ದತ್ತಾಂಶಗಳ ಅಧ್ಯಯನ ವರದಿ 2024
ನಿಮ್ಮ ಕಾಮೆಂಟ್ ಬರೆಯಿರಿ