ಲೋಕಸಭೆ ಚುನಾವಣೆ: ಸುಮಲತಾ ಭೇಟಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಅವರ ನಿವಾಸಕ್ಕೆ ಭಾನುವಾರ (ಮಾ. 31ರಂದು) ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ, ಸುಮಲತಾ ಅವರ ಪುತ್ರ ಅಭಿಷೇಕ ಅಂಬರೀಶ ಇದ್ದರು. ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮುನಿಸು ಮರೆತು … Continued

ಅಡ್ವಾಣಿ ನಿವಾಸದಲ್ಲೇ ಅವರಿಗೆ ʼಭಾರತ ರತ್ನʼ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಅವರು ಪ್ರದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ … Continued

ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಮಾಡಿದ ಆರೋಪದ ಮೇಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಈಶ್ವರಪ್ಪ ಅವರು ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ವೇಳೆ ಚುನಾವಣಾ ಪ್ರಚಾರ ಮಾಡಿದ್ದರು. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿರುವ ಅವರಿಂದ ಮಾದರಿ ನೀತಿ … Continued

ವೀಡಿಯೊ..| ಮರದ ತೊಗಟೆ ಕತ್ತರಿಸಿದ ಕೂಡಲೇ ಮರದಿಂದ ಕಾರಂಜಿಯಂತೆ ಚಿಮ್ಮಿತು ನೀರಿನ ಧಾರೆ…!

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭಾರತೀಯ ಲಾರೆಲ್ ಮರದ ತೊಗಟೆಯನ್ನು ಕತ್ತರಿಸಿದ ನಂತರ ಕಾರಂಜಿಯಂತೆ ನೀರು ಚಿಮ್ಮಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರ ಅಚ್ಚರಿಗೆ ಕಾರಣವಾಗಿದೆ. ಪಾಪಿಕೊಂಡ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಿಗೆಯಲ್ಲಿ ಈ ಮರಗಳಲ್ಲಿ ನೀರು ಸಂಗ್ರಹವಾಗುತ್ತದೆ ಎಂದು ಅರಣ್ಯಾಧಿಕಾರಿಗಳು ಮರದ ತೊಗಟೆಯನ್ನು ಕತ್ತರಿಸಿದ್ದಾರೆ. ಕಿಂಟುಕೂರು … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

“ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ”: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟ ಇಂದಿರಾ ಗಾಂಧಿ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 1970 ರ ದಶಕದಲ್ಲಿ ಆಯಕಟ್ಟಿನ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು “ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು … Continued

ಲೋಕಸಭೆ ಚುನಾವಣೆ: ಬಾರಾಮತಿಯಲ್ಲಿ ಇದು ‘ಪವಾರ್’ ನಡುವೆ ಕದನ ; ಸುನೇತ್ರಾ ಪವಾರ್ vs ಸುಪ್ರಿಯಾ ಸುಳೆ

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶನಿವಾರ ಅಜಿತ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ವಿವಾದಿತ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಸುನೇತ್ರಾ ಪವಾರ್ ಅವರು ಅಜಿತ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸೆಣಸಲಿದ್ದಾರೆ. … Continued

ಲೋಕಸಭೆ ಚುನಾವಣೆ : ಬಿಜೆಪಿಯಿಂದ 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ನಟ ಸನ್ನಿ ದಿಯೋಲಗೆ ಟಿಕೆಟ್‌ ನಿರಾಕರಣೆ

ನವದೆಹಲಿ: ಒಡಿಶಾ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ 11 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಇತ್ತೀಚಿನ ಪಟ್ಟಿಯಲ್ಲಿ, ಬಿಜೆಪಿ ಪಕ್ಷವು ಒಡಿಶಾದಿಂದ ಮೂವರು, ಪಂಜಾಬ್‌ನಿಂದ ಆರು ಮತ್ತು ಪಶ್ಚಿಮ ಬಂಗಾಳದಿಂದ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದೆ. ಪಟ್ಟಿಯಲ್ಲಿ, ನಟ ಮತ್ತು ಹಾಲಿ ಗುರುದಾಸಪುರ ಸಂಸದ ಸನ್ನಿ ಡಿಯೋಲ್ ಬದಲಿಗೆ ದಿನೇಶ್ … Continued

ಖ್ಯಾತ ನಟ ಪ್ರಕಾಶ ಹೆಗ್ಗೋಡು ನಿಧನ

ಬೆಂಗಳೂರು: ಖ್ಯಾತ ನಟ, ರಂಗಕರ್ಮಿ ಪ್ರಕಾಶ ಹೆಗ್ಗೋಡು ಅನಾರೋಗ್ಯದಿಂದ ಶನಿವಾರ (ಮಾರ್ಚ್‌ 30) ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಯೇಸುಪ್ರಕಾಶ್‌ ಕಲ್ಲುಕೊಪ್ಪ ಎಂದೂ ಗುರುತಿಸ್ಪಡುತ್ತಿದ್ದ ಪ್ರಕಾಶ ಹೆಗ್ಗೋಡು ಶಿವಮೊಗ್ಗ … Continued

ತನ್ನ ಜನ್ಮದಿನದಂದು ಆನ್‌ ಲೈನ್‌ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದ ನಂತರ ಅಸ್ವಸ್ಥಗೊಂಡು ಮೃತಪಟ್ಟ ಬಾಲಕಿ..!

ಕಳೆದ ವಾರ ಪಂಜಾಬ್‌ನಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನ ಜನ್ಮದಿನವನ್ನು ಕೇಕ್ ತಿಂದ ನಂತರ ಶಂಕಿತ ವಿಷಾಹಾರದಿಂದ ಸಾವಿಗೀಡಾಗಿದ್ದಾಳೆ ಹುಡುಗಿಯ ತಂಗಿ ಸೇರಿದಂತೆ ಇಡೀ ಕುಟುಂಬ ಕೇಕ್ ತಿಂದ ನಂತರ ಅಸ್ವಸ್ಥಗೊಂಡಿತು ಎಂದು ಆಕೆಯ ಅಜ್ಜ ಹೇಳಿದ್ದಾರೆ. ಪಟಿಯಾಲದ ಬೇಕರಿಯಲ್ಲಿ ಕೇಕ್ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಮೃತ ಬಾಲಕಿ ಮಾನ್ವಿ, … Continued