ಮುಂಬೈ : ಅಚ್ಚರಿಯ ನಡೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಮಾರ್ಚ್ 2 ರಂದು ಮಹಾರಾಷ್ಟ್ರದ ಬಾರಾಮತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿ ಊಟಕ್ಕೆ ಆಹ್ವಾನಿಸಿದ್ದಾರೆ.
1999 ರಲ್ಲಿ ಅವರು ಸ್ಥಾಪಿಸಿದ ಪಕ್ಷವಾದ ಎನ್‌ಸಿಪಿಯಲ್ಲಿ ಒಡಕು ಮತ್ತು ಅವರ ಅಣ್ಣನ ಮಗ ಅಜಿತ ಪವಾರ್ ಅವರೊಂದಿಗಿನ ಸಂಬಂಧ ಹಳಸಿದ ನಂತರ ಅವರು ಕಳೆದ ವರ್ಷ ಜುಲೈನಲ್ಲಿ ಪಕ್ಷ ತೊರೆದು ಬಿಜೆಪಿ ಸರ್ಕಾರದ ಕೈಜೋಡಿಸಿದ ನಂತರ ಶರದ್ ಪವಾರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆ, ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಭೋಜನಕ್ಕೆ ಆಹ್ವಾನ ನೀಡಿದ್ದಾರೆ.
ಶರದ್ ಪವಾರ್ ಅವರ ರಾಜಕೀಯ ಪ್ರತಿಸ್ಪರ್ಧಿಗಳಾದ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಮುಖ್ಯಮಂತ್ರಿ ಶಿಂಧೆ ಅವರು ಪುಣೆಯ ಬಾರಾಮತಿ ಪಟ್ಟಣದ ವಿದ್ಯಾ ಪ್ರತಿಷ್ಠಾನ ಕಾಲೇಜಿನ ಆವರಣದಲ್ಲಿ ‘ನಮೋ ಮಹಾ ರೋಜಗಾರ್ ಮೇಳಾವ’ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ.
ವಿಭಜನೆಯ ನಂತರ ಎನ್‌ಸಿಪಿ ಹೆಸರು ಮತ್ತು ಚಿಹ್ನೆಯನ್ನು ಪಡೆದಿರುವ ಅಜಿತ್ ಪವಾರ್, ಪ್ರಸ್ತುತ ಅವರ ಸೋದರಸಂಬಂಧಿ ಮತ್ತು ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಪ್ರತಿನಿಧಿಸುವ ಬಾರಾಮತಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದ್ದಾರೆ.
ಶಿಂಧೆ, ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರಿಗೆ ನೀಡಲಾದ ಆಹ್ವಾನದಲ್ಲಿ (ಫೆಬ್ರವರಿ 28 ರ ಪತ್ರದ ಭಾಗವಾಗಿದೆ) ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು, ಸಂಸದರಾಗಿ ತಾವು ಮತ್ತು ಸುಳೆ ಅವರು ಬಾರಾಮತಿಯಲ್ಲಿ ಅಧಿಕೃತ ಕಾರ್ಯಕ್ರಮಕ್ಕೆ ಹಾಜರಾಗಲು ಬಯಸುತ್ತೇವೆ ಎಂದು ಹೇಳಿದ್ದಾರೆ. ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷರಾಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಲು ಸಂತೋಷಪಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ವಿದ್ಯಾ ಪ್ರತಿಷ್ಠಾನದಲ್ಲಿ ನಡೆದ ಕಾರ್ಯಕ್ರಮದ ನಂತರ ಅವರು ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಬಾರಾಮತಿಯಲ್ಲಿರುವ ತಮ್ಮ ನಿವಾಸ ‘ಗೋವಿಂದಬಾಗ್‌ನಲ್ಲಿ ಭೋಜನಕ್ಕೆ ತಮ್ಮ ಆಹ್ವಾನವನ್ನು ಸ್ವೀಕರಿಸುವಂತೆ ಅವರು ಶಿಂಧೆ ಅವರಿಗೆ ಮನವಿ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ