ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ…!

ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ತಲೆ ಕೂದಲು ಬೆಳೆಸಿಕೊಳ್ಳುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ಮಾಜಿ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಲ್ಲಿ ಕೌಸ್ತವ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಉಪಸ್ಥಿತರಿದ್ದರು. ಬಾಗ್ಚಿ ಬುಧವಾರ (ಫೆಬ್ರವರಿ 28) ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ಗೆ ವಿದಾಯ ಹೇಳುವ ವೇಳೆ ಅವರು ಪಕ್ಷದ ಸಂಘಟನೆಯಲ್ಲಿ ತಮಗೆ ‘ಸೂಕ್ತ ಗೌರವ ಸಿಗಲಿಲ್ಲ’ ಎಂದು ಆರೋಪಿಸಿದ್ದರು.

ಕಾಂಗ್ರೆಸ್‌ ಪಕ್ಷಕ್ಕೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ವಿರುದ್ಧ ಹೋರಾಡುವ ಮನಸ್ಸಿಲ್ಲ ಎಂದು ಆರೋಪಿಸಿದ ಅವರು, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಳೆದ ವರ್ಷ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಕೌಸ್ತವ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
2023ರ ಮಾರ್ಚ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಾಗ ತಮ್ಮ ತಲೆ ಬೋಳಿಸಿಕೊಂಡು, ರಾಜ್ಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಪತನಗೊಳ್ಳುವವರೆಗೆ ತಾನು ಕೂದಲು ಬೆಳೆಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

ಟಿಎಂಸಿಯ ಕಟು ಟೀಕಾಕಾರರಾಗಿ ಗುರುತಿಸಿಕೊಂಡಿರುವ ಕೌಸ್ತವ ಅವರು, ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ದಲ್ಲಿ ಟಿಎಂಸಿ ಪಾಲ್ಗೊಳ್ಳುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
‘ಹೊರಗೆ ಹೋಗಲೇಬೇಕು ಎಂದು ನಿರ್ಧರಿಸಿದವರ ವಿಚಾರದಲ್ಲಿ ನಾವೇನು ಮಾಡಲು ಸಾಧ್ಯ. ಅದು ಅವರ ವೈಯಕ್ತಿಕ ತೀರ್ಮಾನ’ ಎಂದು ಕಾಂಗ್ರೆಸ್‌ ನಾಯಕ ಅಧೀರ ರಂಜನ್‌ ಚೌಧರಿ ಹೇಳಿದ್ದಾರೆ.
ರಾಜ್ಯ ಶಿಕ್ಷಣ ಸಚಿವ ಹಾಗೂ ಟಿಎಂಸಿ ನಾಯಕ ಬ್ರತ್ಯ ಬಸು, ‘ಕೌಸ್ತವ್‌ ಬಾಗ್ಚಿ ಯಾರೆಂಬುದೇ ನಮಗೆ ಗೊತ್ತಿಲ್ಲ’ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement