ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ನವದೆಹಲಿ : ಎಲ್​ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರದಲ್ಲಿ ಇಂದಿನಿಂದ (ಮಾರ್ಚ್​ 1) ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್​ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿವೆ.
ಸತತ ಎರಡನೇ ತಿಂಗಳು ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದಂತಾಗಿದ್ದು, ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ 1,795 ರೂ. ಆಗಿದೆ. ಮುಂಬೈನಲ್ಲಿ 1,749 ರೂ.ಗಳಾಗಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಕ್ರಮವಾಗಿ 1,960 ರೂ, ಮತ್ತು 1,911 ರೂ.ಗಳಿಗೆ ಏರಿಕೆಯಾಗಿದೆ. ಫೆಬ್ರವರಿ 1 ರಂದು 19 ಕೆಜಿ ಗ್ಯಾಸ್ ಸಿಲಿಂಡರ್ ದರ 14 ರೂ. ಹೆಚ್ಚಾಗಿತ್ತು.
ಕಳೆದ ಎರಡು ತಿಂಗಳ ದರ ಪರಿಷ್ಕರಣೆಯಲ್ಲಿ ಕೋಲ್ಕತ್ತಾದಲ್ಲಿ ಗರಿಷ್ಠ ಹೆಚ್ಚಳ ಕಂಡುಬಂದಿದೆ. ಕೋಲ್ಕತ್ತಾದಲ್ಲಿ ಎರಡು ತಿಂಗಳ ಅವಧಿಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 42 ರೂಪಾಯಿ ಏರಿಕೆಯಾಗಿದೆ. ಮುಂಬೈನಲ್ಲಿ 40.5 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ 39.5 ರೂ. ಏರಿಕೆ ಆಗಿದೆ. ದಕ್ಷಿಣ ಭಾರತದ ಅತಿದೊಡ್ಡ ಮಹಾನಗರವಾದ ಚೆನ್ನೈಯಲ್ಲಿ ಎರಡು ತಿಂಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕನಿಷ್ಠ 36 ರೂ. ಏರಿಕೆಯಾಗಿದೆ.
ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಆಗಸ್ಟ್ 30 ರಿಂದ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement