ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ

ಬಾಗಲಕೋಟೆ : ಹಿರಿಯ ಪತ್ರಕರ್ತ ಬಾಗಲಕೋಟೆಯ ರಾಮ ಮನಗೂಳಿ ಅವರು ಇಂದು ಶುಕ್ರವಾರ ನಿಧನರಾಗಿದ್ದಾರೆ.
ಅವರು ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
2002 ರಲ್ಲಿ ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ‌ಸಂಘದ ಅಧ್ಯಕ್ಷರಾದ್ದಾಗ ಬಾಗಲಕೋಟೆ ಯಲ್ಲಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆದಿತ್ತು.
ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೆಸ್ ಕ್ಲಬ್ ವತಿಯಿಂದ ಅವರ ನೇತೃತ್ವದಲ್ಲಿ ಬೆಳಗಾವಿ ವಿಭಾಗಮಟ್ಟದ ಪತ್ರಕರ್ತರ ಕಾರ್ಯಾಗಾರ ನಡೆಸಿದ್ದರು. ಪತ್ರಕರ್ತರಿಗೆ ಯಾರಿಗೆ ಸಮಸ್ಯೆಯಾದರೆ ತಕ್ಷಣ ಸ್ಪಂದಿಸುವ ಜತೆಗೆ ಸಹಾಯ ಮಾಡುವ ಮನೋಭಾವ ಹೊಂದಿದ್ದರು

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement