ಬೆಂಗಳೂರು : ಮಾಜಿ ಸಚಿವ ಮನೋಹರ ತಹಶೀಲ್ದಾರ ಅವರು ಇಂದು, ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮನೋಹರ ತಹಶೀಲ್ದಾರ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಉಪಸ್ಥಿತರಿದ್ದರು.
50 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದ ಮಾಜಿ ಸಚಿವ ಮನೋಹರ ತಹಶೀಲ್ದಾರ ಕಳೆದ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಜೆಡಿಎಸ್ ಸೇರ್ಪಡೆಕೊಂಡಿದ್ದರು. ಈಗ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಬಿಜೆಪಿ ಮನೋಹರ ತಹಶೀಲ್ದಾರ ಅವರನ್ನು ಕರೆತರುವ ಮೂಲಕ ಹಾವೇರಿ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲವರ್ಧನೆಗೆ ಮುಂದಾಗಿದೆ.
ಹಿಂದುಳಿದ ವರ್ಗದ ಧುರೀಣರು ಬಿಜೆಪಿ ಸೇರಿದ್ದರಿಂದ ಹಾವೇರಿ ಜಿಲ್ಲೆಗೆ ಒಂದು ದೊಡ್ಡ ಶಕ್ತಿ ಲಭಿಸಿದೆ ಬಿ.ವೈ ವಿಜಯೇಂದ್ರ ಅವರು ತಿಳಿಸಿದರು. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು; ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಜನ ಬಯಸುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಮನೋಹರ ತಹಶೀಲ್ದಾರ ಅವರು, ಯಾವುದೇ ಬೇಡಿಕೆ ಮುಂದಿಟ್ಟು ಬಿಜೆಪಿಗೆ ಸೇರ್ಪಡೆಯಾಗಿಲ್ಲ. ಎಲ್ಲರೂ ಒಪ್ಪಿದ್ದಕ್ಕೆ ಬಿಜೆಪಿಗೆ ಬಂದಿದ್ದೇನೆ. ಬಸವರಾಜ ಬೊಮ್ಮಾಯಿ ಅವರು ಇರುವಷ್ಟು ಕಾಲ ಅವರೊಂದಿಗೆ ಇರಬೇಕು ಎಂದು ಬಂದಿದ್ದೇನೆ. ಪಕ್ಷದಲ್ಲಿ ಗೌರವ ಕೊಡಿ ಎಂದು ಕೇಳಿದ್ದೇನೆಯೇ ಬಿಟ್ಟರೆ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ