ಪಣಂಬೂರು : ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು

ಮಂಗಳೂರು : ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ.
ಬೀಚ್‌ನ ಲೈಫ್ ಗಾರ್ಡ್ ಗಳ ಎಚ್ಚರಿಕೆ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ (24) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಲಿಖಿತ್ ಕೈಕಂಬದ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ, ನಾಗರಾಜ ಬೈಕಂಪಾಡಿಯಲ್ಲಿ ಕಂಪನಿಯೊಂದರಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಂಗಳೂರು : ಮೊಬೈಲ್‌ ಫೋನ್‌ ವಿಚಾರಕ್ಕೆ ಜಗಳ ; ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

ನಿಮ್ಮ ಕಾಮೆಂಟ್ ಬರೆಯಿರಿ

advertisement