ಲೋಕಸಭೆ ಚುನಾವಣೆ : ಬಿಜೆಪಿ ಟಿಕೆಟ್ ಘೋಷಣೆಯಾದ ನಂತ್ರ ನಾನು ಸ್ಪರ್ಧಿಸುವುದಿಲ್ಲ ಎಂದ ಭೋಜಪುರಿ ನಟ…!

ನವದೆಹಲಿ: ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಂದು ಹೆಸರು ಘೋಷಿಸಲಾಗಿದ್ದ ಭೋಜಪುರಿ ಗಾಯಕ ಮತ್ತು ನಟ ಪವನ್ ಸಿಂಗ್ ಅವರು, ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಭಾನುವಾರ ಘೋಷಿಸಿದ್ದಾರೆ.
“ನನ್ನನ್ನು ನಂಬಿ ಅಸನ್ಸೋಲ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಘೋಷಿಸಿದ್ದಕ್ಕಾಗಿ ನಾನು ಬಿಜೆಪಿ ನಾಯಕತ್ವಕ್ಕೆ ಧನ್ಯವಾದ ಹೇಳುತ್ತೇನೆ, ಆದರೆ ಕೆಲವು ಕಾರಣಗಳಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ” ಎಂದು ಅವರು ಭಾನುವಾರ ಮಧ್ಯಾಹ್ನ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಪವನ್ ಸಿಂಗ್ ಭೋಜ್‌ಪುರಿ ಸಿನಿಮಾದ ಅತ್ಯಂತ ದುಬಾರಿ ನಟರಲ್ಲಿ ಒಬ್ಬರಾಗಿದ್ದಾರೆ.

ಶನಿವಾರ, 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ, ಅಸನ್ಸೋಲ್ ಕ್ಷೇತ್ರದಿಂದ ಪವನ್ ಅವರ ಹೆಸರನ್ನು ಘೋಷಿಸಿತ್ತು. ಬಂಗಾಳದ ಸ್ಥಾನಕ್ಕೆ ಬಿಹಾರದ ನಿವಾಸಿ 38 ವರ್ಷದ ಸಿಂಗ್ ಆಯ್ಕೆ ವಿವಾದಕ್ಕೆ ಕಾರಣವಾಗಿತ್ತು. . ಸದ್ಯ, ಈ ಕ್ಷೇತ್ರವನ್ನು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಪ್ರತಿನಿಧಿಸುತ್ತಿದ್ದಾರೆ.
ಪವನ್ ಸಿಂಗ್ ಅವರಿಗೆ ಟಿಕೆಟ್ ನೀಡುವ ಬಿಜೆಪಿ ನಿರ್ಧಾರವನ್ನು ಟೀಕಿಸಿದ್ದ ಟಿಎಂಸಿ ಸಂಸದ ಸಾಕೇತ್ ಗೋಖಲೆ, ಸ್ತ್ರೀದ್ವೇಷದ, ಅಶ್ಲೀಲ ಮತ್ತು ಬೆಂಗಾಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪವನ್ ವೀಡಿಯೊ ಮಾಡುತ್ತಾರೆ ಎಂದು ಆರೋಪಿಸಿದ್ದರು. ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ ಕೆಲ ಸಮಯದ ನಂತರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭಿಷೇಕ್ ಬ್ಯಾನರ್ಜಿ, ಇದು ಪಶ್ಚಿಮ ಬಂಗಾಳ ಜನತೆಯ ಅದಮ್ಯ ಸ್ಫೂರ್ತಿ ಮತ್ತು ಶಕ್ತಿಯ ಪ್ರತೀಕ ಎಂದು ಬರೆದುಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement