ಸಂಸದ ರಮೇಶ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು : ಬೆಳಗಾವಿ ಆಸ್ಪತ್ರೆಗೆ ದಾಖಲು

ಬೆಳಗಾವಿ : ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಅವರಿಗೆ ಮೆದುಳಿನ ರಕ್ತ ಸ್ರಾವ ಸಂಭವಿಸಿದೆ ಎಂದು ವರದಿಯಾಗಿದ್ದು, ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
71 ವರ್ಷದ ರಮೇಶ ಜಿಗಜಿಣಗಿ ಅವರು ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವರೂ ಆಗಿದ್ದರು. ಈ ಹಿಂದೆ ಜ.28 ರಂದು ಅವರಿಗೆ ಎದೆನೋವು ಕಾಣಿಸಿಕೊಂಡ ನಂತರ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ, ನಂತರ ಚೇತರಿಸಿಕೊಂಡುದ್ದರು.
1998, 1999 ಮತ್ತು 2004ರಲ್ಲಿ ಚಿಕ್ಕೋಡಿ (ಲೋಕ ಸಭೆ ಚುನಾವಣಾ ಕ್ಷೇತ್ರ)ದಿಂದ ಆಯ್ಕೆಯಾಗಿದ್ದರು. 2009, 2014 ಮತ್ತು 2019ರಲ್ಲಿ ನಡೆದ ಚುನಾವಣೆಯಲ್ಲಿ ವಿಜಯಪುರ ಲೋಕ ಸಭಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 1983 ರಿಂದ 98ರ ತನಕ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ಜನತಾದಳದ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement