ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೆಂಗಳೂರು : ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರಿಂದ ವಿಧಾನಸೌಧದಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಕೆಲವರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿತ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು.
ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನದ ಬಗ್ಗೆ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಎಫ್‌ಎಸ್‌ಎಲ್‌ (FSL) ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಾರೆ ಎಂಬ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸುಮೋಟೊ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ 26 ಮಂದಿಯ ಪಟ್ಟಿಯನ್ನ ಸಿದ್ಧಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್ ಸ್ಯಾಂಪಲ್‌ಗಳನ್ನ ಎಫ್ಎಸ್ಎಲ್‌ ಪರೀಕ್ಷೆಗೆ ರವಾನೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ʼಕನ್ನಡತಿʼ ಧಾರಾವಾಹಿಯ ನಟ ಕಿರಣ ರಾಜ್‌ ಕಾರು ಅಪಘಾತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement