ಸಿದ್ದಾಪುರ : ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ(ಕೆಎಫ್‌ಡಿ)ಗೆ ಒಂದೇ ದಿನ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಸಿದ್ದಾಪುರ ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದ 88 ವರ್ಷದ ವೃದ್ಧ ಮತ್ತು ಕಲ್ಲೂರು ಗ್ರಾಮದ 65 ವರ್ಷದ ವೃದ್ಧ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗನ ಕಾಯಿಲೆಯಿಂದ ಉತ್ತರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ. ಈ ವರ್ಷ ಸಿದ್ದಾಪುರ ತಾಲೂಕಿನಲ್ಲಿಯೇ ಮಂಗನ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಎರಡು ದಿನಗಳಿಂದ ಶಿರಸಿ ತಾಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದರು. ಮಂಗನ ಕಾಯಿಲೆಯಿಂದ ಸಿದ್ದಾಪುರ, ಶಿರಸಿ ತಾಲೂಕಿನಲ್ಲಿ ಆತಂಕ ಹೆಚ್ಚಿದೆ. ಲಸಿಕೆ ಇಲ್ಲದೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರದಾಡುವಂತಾಗಿದೆ. ಸಿದ್ದಾಪುರ ತಾಲೂಕಿನಲ್ಲಿಯೇ ಸುಮಾರು 45 ಜನ ಮಂಗನಕಾಯಿಲೆಗೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement