ಡಿಕೆ ಶಿವಕುಮಾರಗೆ ಬಹುದೊಡ್ಡ ರಿಲೀಫ್‌..: ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಜಾಗೊಳಿಸಿದೆ.
ಈ ಪ್ರಕರಣವು ತೆರಿಗೆ ವಂಚನೆ ಮತ್ತು ಕೋಟ್ಯಂತರ ಮೌಲ್ಯದ ಹವಾಲಾ ವ್ಯವಹಾರದ ಆರೋಪಗಳಿಗೆ ಸಂಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕನನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸೆಪ್ಟೆಂಬರ್ 2019 ರಲ್ಲಿ ಬಂಧಿಸಿತ್ತು. ದೆಹಲಿ ಹೈಕೋರ್ಟ್ ಒಂದು ತಿಂಗಳ ನಂತರ ಅವರಿಗೆ ಜಾಮೀನು ನೀಡಿತ್ತು. ಶಿವಕುಮಾರ್ ಅವರನ್ನು ಸೆಪ್ಟೆಂಬರ್ 3, 2019 ರಂದು ಇ.ಡಿ. ಬಂಧಿಸಿತ್ತು ಮತ್ತು ದೆಹಲಿ ಹೈಕೋರ್ಟ್ 2019 ರ ಅಕ್ಟೋಬರ್ 23 ರಂದು ಜಾಮೀನು ನೀಡಿತ್ತು. ಶಿವಕುಮಾರ ಅವರು ಇದು ಬಿಜೆಪಿ ರಾಜಕೀಯ ಸೇಡಿನ ತಂತ್ರ ಎಂದು ಆರೋಪಿಸಿದ್ದರು ಮತ್ತು ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿದ್ದರು.

ಕಾಂಗ್ರೆಸ್ ನಾಯಕನ ವಿರುದ್ಧ ಇಡಿ ತನಿಖೆಯು 2017 ರಲ್ಲಿ ಅವರಿಗೆ ಮತ್ತು ಅವರ ಸಹಾಯಕರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಗಳನ್ನು ನಂತರ ಬಂದಿದೆ. ಶಿವಕುಮಾರ ಅವರಿಗೆ ಸಂಬಂಧಿಸಿದ ದೆಹಲಿಯ ಸ್ಥಳಗಳ ಮೇಳೆ 2017ರಲ್ಲಿ ಆದಾಯ ತೆರಿಗೆ ಇಲಾಖೆಯ ದಾಳಿ ನಡೆದಿತ್ತು. ಆಗ ಸುಮಾರು 7 ಕೋಟಿ ರೂ ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ 2018 ರಲ್ಲಿ ಅವರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. 2019ರ ಅಕ್ಟೋಬರ್ ನಲ್ಲಿ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಅದನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿತ್ತು.
“120B IPC ಯು ಪಿಎಂಎಲ್‌ಎಯನ್ನು ಜಾರಿಗೊಳಿಸಲು ಇಡಿಯನ್ನು ಸಕ್ರಿಯಗೊಳಿಸಲು ಪೂರ್ವಭಾವಿ ಸ್ವತಂತ್ರ ಅಪರಾಧವನ್ನು ರೂಪಿಸಬಹುದೇ ಎಂಬ ಪ್ರಶ್ನೆ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್ ನಿರ್ಧರಿಸಿದೆ” ಎಂದು ನ್ಯಾಯಾಲಯ ಮಂಗಳವಾರ ಹೇಳಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

ಶಿವಕುಮಾರ 2019 ರಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದರು ಮತ್ತು ಇಡಿ ನೀಡಿದ ಸಮನ್ಸ್ ವಜಾಗೊಳಿಸುವಂತೆ ಕೋರಿದ್ದರು.
ಆದರೆ ಹೈಕೋರ್ಟ್‌ ಈ ರಿಟ್ ಅರ್ಜಿಗಳನ್ನು ವಜಾಗೊಳಿಸಿತು. ಇದರ ವಿರುದ್ಧ ಶಿವಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಮಂಗಳವಾರ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿರುವ ಸರ್ವೋಚ್ಚ ನ್ಯಾಯಾಲಯ ವಿಚಾರಣೆಯನ್ನು ರದ್ದುಗೊಳಿಸಿದೆ.
ಶಿವಕುಮಾರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದ್ದರು. ಉಳಿದ ಆರೋಪಿಗಳ ಪರವಾಗಿ ವಕೀಲರಾದ ಡಾ. ಅಭಿಷೇಕ ಮನು ಸಿಂಘ್ವಿ ಮತ್ತು ಎಸ್. ನಾಗಮುತ್ತು ವಕಾಲತ್ತು ವಹಿಸಿದ್ದರು. ವಕೀಲರಾದ ಪರಮಾತ್ಮ ಸಿಂಗ್, ಮಾಯಾಂಕ್ ಜೈನ್ ಮತ್ತು ಮಧುರ್ ಜೈನ್ ಕೂಡ ತಂಡದಲ್ಲಿದ್ದರು.
ಶಿವಕುಮಾರ ವಿರುದ್ಧದ ಮತ್ತೊಂದು ಭ್ರಷ್ಟಾಚಾರ ಪ್ರಕರಣ ಈ ಹಂತದಲ್ಲಿ ಕರ್ನಾಟಕದಲ್ಲಿ ಭಾರೀ ರಾಜಕೀಯ ಗದ್ದಲದ ಕೇಂದ್ರವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇತ್ತೀಚೆಗೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನವೇ ಈ ಪ್ರಕರಣದಲ್ಲಿ ಸಿಬಿಐ ಸರ್ಕಾರದ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement