ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸ್ವೀಪ್, ತೆಲಂಗಾಣ, ತಮಿಳುನಾಡಿನಲ್ಲಿ ಬಿಜೆಪಿ ಗಮನಾರ್ಹ ಸಾಧನೆ; ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌

ಬೆಂಗಳೂರು : 2024 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಭವಿಷ್ಯ ನುಡಿದಿದೆ.
ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಸೋಮವಾರ (ಮಾರ್ಚ್ 4) ಪ್ರಕಟವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಮತ್ತು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಕೇವಲ ನಾಲ್ಕು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆ ಅಂದಾಜಿಸಲಾಗಿದೆ.
ಕರ್ನಾಟಕದ ೨೮ ಸ್ಥಾನಗಳಲ್ಲಿ ಎನ್‌ಡಿಎ ಒಟ್ಟು 24 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದ್ದು, ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ.
ಕಾಂಗ್ರೆಸ್‌ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಭೇರಿ ಬಾರಿಸಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿತ್ತು, ಆದರೆ ಲೋಕಸಭೆಯ ಸ್ಪರ್ಧೆಯಲ್ಲಿ ಕಾಂಗ್ರೆಸ್‌ ಹಿಂದುಳಿದಿದೆ.
ಕರ್ನಾಟಕದಲ್ಲಿ ಸಮೀಕ್ಷೆ ಏನು ಹೇಳುತ್ತದೆ..?
ಒಟ್ಟು ಸೀಟುಗಳು: 28
ಬಿಜೆಪಿ: 22
ಕಾಂಗ್ರೆಸ್: 04
ಜೆಡಿಎಸ್:02

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ತೆಲಂಗಾಣದಲ್ಲಿ ಬಿಜೆಪಿ 5 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.
ಬಿಜೆಪಿ: 05
ಬಿಆರ್‌ಎಸ್‌ : 02
ಕಾಂಗ್ರೆಸ್: 09
ಎಐಎಂಐಎಂ : 01
ತಮಿಳುನಾಡಿನಲ್ಲಿ, ಡಿಎಂಕೆ 20 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಬಿಜೆಪಿ ದೊಡ್ಡ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ.
ತಮಿಳುನಾಡು+ಪುದುಚೇರಿ ಒಟ್ಟು ಸ್ಥಾನಗಳು: 40
ಡಿಎಂಕೆ: 20
ಕಾಂಗ್ರೆಸ್: 06
ಬಿಜೆಪಿ: 05
ಎಐಎಡಿಎಂಕೆ: 04
ಇತರೆ: 05

ಇಂಡಿಯಾ ಟಿವಿ ಮತ್ತು ಸಿಎನ್‌ಎಕ್ಸ್ ಸಮೀಕ್ಷೆಯು ಬಿಜೆಪಿಯು ಕೇರಳದಲ್ಲಿ ಮೂರು ಸ್ಥಾನಗಳನ್ನು ಗೆಲ್ಲಬಹುದು ಭವಿಷ್ಯ ನುಡಿದಿದೆ. ಇಂಡಿಯಾಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಪ್ರಕಾರ, ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಮೈತ್ರಿಕೂಟ 11 ಸ್ಥಾನಗಳಲ್ಲಿ ಪ್ರಾಬಲ್ಯ ಸಾಧಿಸಬಹುದು, ಎಲ್‌ಡಿಎಫ್ ಆರು ಸ್ಥಾನಗಳಲ್ಲಿ ಗೆಲ್ಲಬಹುದು. ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂದು ಹೇಳಿದೆ. ತಿರುವನಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೀವ ಚಂದ್ರಶೇಖರ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.
ಕಳೆದ ಚುನಾವಣೆಯಲ್ಲಿ ಯುಡಿಎಫ್ ಕೇರಳದ 20 ಲೋಕಸಭಾ ಸ್ಥಾನಗಳ ಪೈಕಿ 19 ಸ್ಥಾನಗಳನ್ನು ಗೆದ್ದು  ಕ್ಲೀನ್ ಸ್ವೀಪ್ ಸಾಧಿಸಿತ್ತು.
ಕೇರಳ 
ಒಟ್ಟು ಸ್ಥಾನಗಳು-20
ಯುಡಿಎಫ್‌-11 ಸ್ಥಾನಗಳು
ಬಿಜೆಪಿ-3 ಸ್ಥಾನಗಳು
ಎಲ್‌ಡಿಎಫ್‌-6 ಸ್ಥಾನಗಳು

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement