ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಫೋಟೋ ಬಿಡುಗಡೆ: ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಬಾಂಬರ್ ಫೋಟೋ ಬಿಡುಗಡೆ ಮಾಡಿರುವ ಎನ್ಐಎ (NIA) ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ಎನ್ಐಎ(NIA)ಗೆ ಹಸ್ತಾಂತರಿಸಲಾಗಿದ್ದು, ಅದು ತನಿಖೆಯನ್ನು ಅಧಿಕೃತವಾಗಿ ಕೈಗೆತ್ತಿಕೊಂಡಿದೆ. ಇದೀಗ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಆರೋಪಿಯ​ ಫೋಟೋ ಬಿಡುಗಡೆ ಮಾಡಿ ಈ ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ. ಈ ಆರೋಪಿ ಬಗ್ಗೆ ತಿಳಿದರೆ ಕೂಡಲೇ 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಎನ್ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಎನ್‌ಐಎ ಅಧಿಕಾರಿಗಳು ಮಂಗಳವಾರ ರಾಮೇಶ್ವರ ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದರು. ಕ್ಯಾಶ್ ಕೌಂಟರ್, ಬಾಂಬ್‌ ಸ್ಫೋಟಗೊಂಡ ಸ್ಥಳ ಸಿಸಿಕ್ಯಾಮರಾ ಇತ್ಯಾದಿ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಘಟನೆ ಬಗ್ಗೆ ಕೆಫೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನ ಎನ್‌ಐಎ ಅಧಿಕಾರಿಗಳಿಗೆ ನೀಡಿದ್ದಾರೆ.
ಆರಂಭದಲ್ಲಿ ಪೊಲೀಸರು ಎಲ್ಲ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಕನ್ನಡಕ ಹಾಕಿರುವ ದೃಶ್ಯಗಳು ಸೆರೆಯಾಗಿದ್ದವು. ಆದರೆ ನಂತರ ಈ ಬಗ್ಗೆ ಸಿಸಿಬಿ ನಡೆಸಿದ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದೇ ಇದ್ದ ಒಂದು ಫೋಟೋವನ್ನು ಪತ್ತೆ ಮಾಡಿದೆ. ಇದೀಗ ಅದೇ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement