ಲಕ್ನೋ : ಉತ್ತರ ಪ್ರದೇಶದ ಜೌನ್‌ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ ಯಾದವ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ.
ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ನಾಯಕನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಅವರು ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ ವೈದ್ಯರು ಪ್ರಕಟಿಸಿದರು.
ಪ್ರಮೋದಯಾದವ್ ಅವರು 2012 ರಲ್ಲಿ ರಾಜ್ಯದ ಮಲ್ಹಾನಿ ವಿಧಾನಸಭೆಯಿಂದ ಅಭ್ಯರ್ಥಿಯಾಗಿದ್ದರು.
ಪೊಲೀಸ್ ವರಿಷ್ಠಾಧಿಕಾರಿ ಕೂಡ ಆಸ್ಪತ್ರೆಗೆ ಆಗಮಿಸಿದ್ದು, ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
ಘಟನೆಯ ಬಗ್ಗೆ ವಿವರಿಸಿದ ಪೊಲೀಸರು, ಕಾರ್ಡ್ ನೀಡುವ ನೆಪದಲ್ಲಿ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ಎಂದು ಜೌನ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ಅಜಯಪಾಲ ಶರ್ಮಾ ಹೇಳಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಈ ಪ್ರಕರಣದಲ್ಲಿ ಮೂವರು ಭಾಗಿಯಾಗಿರುವ ಶಂಕೆ ಇದೆ ಎಂದರು. ಶಂಕಿತರ ಬಗ್ಗೆ ವಿವರಗಳನ್ನು ಸ್ವೀಕರಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರೊಬ್ಬರನ್ನು ನಕ್ಸಲೀಯರು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಕೈಲಾಶ ನಾಗ್ ಎಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದರು. ಬಿಜೆಪಿ ಜಿಲ್ಲೆಯ ಬಿಜೆಪಿಯ ‘ವ್ಯಾಪಾರಿ ಪ್ರಕಾಶ’ (ವ್ಯಾಪಾರಿಗಳ ಸೆಲ್) ಪದಾಧಿಕಾರಿಯಾಗಿದ್ದರು. ಅವರು ತಮ್ಮ ಗ್ರಾಮದಲ್ಲಿ ಕೆಲಸಕ್ಕಾಗಿ ತಮ್ಮ ಜೆಸಿಬಿ ಯಂತ್ರವನ್ನು ನೀಡಿದ್ದರು. ಸ್ಥಳಕ್ಕಾಗಮಿಸಿದ ನಕ್ಸಲೀಯರ ಗುಂಪು ನಾಗ್ ಅವರನ್ನು ಗುಂಡಿಕ್ಕಿ ಸಾಯಿಸುವ ಮುನ್ನ ಯಂತ್ರಕ್ಕೆ ಬೆಂಕಿ ಹಚ್ಚಿದೆ.
ಇದು ಕಳೆದ ಒಂದು ವರ್ಷದಲ್ಲಿ ಛತ್ತೀಸ್‌ಗಢದ ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ನಕ್ಸಲೀಯರಿಂದ ಬಿಜೆಪಿ ನಾಯಕನ ಎಂಟನೇ ಹತ್ಯೆಯಾಗಿದೆ ಎಂದು ವರದಿಯಾಗಿದೆ.
ಕಳೆದ ವಾರ ಬಿಜಾಪುರ ಜಿಲ್ಲೆಯ ತೋಯ್ನಾರ್ ಗ್ರಾಮದಲ್ಲಿ ಮತ್ತೊಬ್ಬ ಸ್ಥಳೀಯ ಬಿಜೆಪಿ ಮುಖಂಡ ತಿರುಪತಿ ಕಟ್ಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ರತನ್ ದುಬೆ ಅವರನ್ನು ನವೆಂಬರ್ 2023 ರಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಚಾರ ನಡೆಸುತ್ತಿದ್ದಾಗ ಅವರನ್ನು ಹತ್ಯೆ ಮಾಡಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ