ಪಾಕ್ ಪರ ಘೋಷಣೆ ಪ್ರಕರಣ: ಸಂಸದ ಸೈಯದ್ ನಾಸಿರ್ ಹುಸೇನಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

ಬೆಂಗಳೂರು : ಕಳೆದ ವಾರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸಭೆಯೊಳಗೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸಿದ ಕೆಲವು ದಿನಗಳ ನಂತರ, ಈ ಪ್ರಕರಣದಲ್ಲಿ ತನಿಖೆ ಪೂರ್ಣವಾಗುವವರೆಗೂ ಸೈಯದ್ ನಾಸಿರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರಿಗೆ ಪತ್ರ ಬರೆದಿದ್ದಾರೆ.
ನಿವೃತ್ತ ಐಎಎಸ್, ಐಪಿಎಸ್ ಮತ್ತು ಐಆರ್‌ಎಸ್ ಅಧಿಕಾರಿಗಳು ತಮ್ಮ ಪತ್ರದಲ್ಲಿ, “ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಸದಸ್ಯರ ಸುತ್ತಲಿದ್ದವರು ಕರ್ನಾಟಕದ ಶಾಸಕಾಂಗ ಭವನದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಯನ್ನು ಬಹಿರಂಗವಾಗಿ ಕೂಗಿದ್ದರಿಂದ ಹಾಗೂ ಚುನಾಯಿತರಾದ ಸದಸ್ಯರು ಇಂತಹ ಘೋಷಣೆಗಳನ್ನು ವಿರೋಧಿಸದ ಕಾರಣ ಜನತೆಗೆ ತೀವ್ರ ನೋವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಅವರು ತಮ್ಮ ಸುತ್ತಲಿನ ಮಾಧ್ಯಮ ಪ್ರತಿನಿಧಿಗಳಿಗೆ ಆಕ್ಷೇಪಾರ್ಹ ಪದಗಳಿಂದ ಬೆದರಿಕೆ ಹಾಕಿದ್ದಾರೆ ಮತ್ತು ಘಟನೆಯನ್ನು ವರದಿ ಮಾಡದಂತೆ ಅಸಭ್ಯವಾಗಿ ಕೂಗಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.

“ಕ್ರೈಂ ನಂ.20/2024 ರಲ್ಲಿ ವಿಧಾನಸೌಧ ಪೊಲೀಸರು ಸುಮೋಟೋ ಪೊಲೀಸ್ ದೂರನ್ನು ದಾಖಲಿಸಿದ್ದಾರೆ ಮತ್ತು ಸೈಯದ್ ನಸೀರ್ ಹುಸೇನ್ ಅವರ ಮೂವರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಅವರ ತನಿಖೆ ಪ್ರಗತಿಯಲ್ಲಿದೆ” ಎಂದು ಅದು ಹೇಳಿದೆ. ಈ ಪ್ರಕರಣದ ತನಿಖೆಯ ತನಕ ಹೊಸದಾಗಿ ಚುನಾಯಿತರಾದ ರಾಜ್ಯಸಭಾ ಸದಸ್ಯರಾದ ಸೈಯದ್ ನಸೀರ್ ಹುಸೇನ್ ಅವರಿಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಲು ಪ್ರಮಾಣ ವಚನ ಬೋಧಿಸದಂತೆ ನಾವು ವಿನಂತಿಸುತ್ತೇವೆ ಎಂದು ಅದು ಹೇಳಿದೆ.
ಈ ಪ್ರಕರಣದಲ್ಲಿ ಬಂಧಿತರನ್ನು ದೆಹಲಿಯ ಇಲ್ತಾಜ್, ಬೆಂಗಳೂರಿನ ಆರ್‌ಟಿ ನಗರದ ಮುನಾವರ್ ಮತ್ತು ಹಾವೇರಿಯ ಬ್ಯಾಡಗಿಯ ಮೊಹಮ್ಮದ್ ಶಫಿ ಎಂದು ಗುರುತಿಸಲಾಗಿದೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಗಳನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಘಟನೆಯು ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement