ಹೊನ್ನಾವರ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಕೆರೆಮನೆಯ ಆಶ್ರಯದಲ್ಲಿ ೧೪ನೇ ವರ್ಷದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಮಾರ್ಚ್ ೧೬ರಿಂದ ೨೦ರ ವರೆಗೆ ನಡೆಯಲಿದೆ ಎಂದು ಇಡಗುಂಜಿ ಮೇಳದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.
ಐದು ದಿನಗಳ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ, ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಹಾಗೂ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಶತಾವಧಾನಿ ಡಾ. ಆರ್. ಗಣೇಶ ಅವರಿಗೆ ಈ ವರ್ಷದ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಾಟ್ಯೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಎಂ.ಎಲ್.ಸಾಮಗ ಮಲ್ಪೆ ಅವರಿಗೆ ಪ್ರದಾನ ಮಾಡಲಾಗುತ್ತಿದ್ದ ಮಾರ್ಚ್ ೧೭ರಂರ ನಾಟೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಅಲ್ಲದೆ, ಮಾರ್ಚ್ ೧೬ರಿಂದ ೨೦ರ ವರೆಗೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕರ್ನಾಟಕ, ಕೇರಳ ಮುಂತಾದ ರಾಜ್ಯಗಳಿಂದ ಕಲಾತಂಡಗಳು ಪಾಲ್ಗೊಳ್ಳಿದ್ದು, ಶಾಲಾ ಮಕ್ಕಳಿಗಾಗಿ ತುಮರಿಯ ತಂಡದಿಂದ ಅನ್ಯಾಳ ಡೈರಿ ನಾಟಕ ಪ್ರದರ್ಶನ ನಡೆಯಲಿದೆ. ಕಲಾಗಂಗೋತ್ರಿಯವರಿಂದ ನಡೆಯುವ ನಾಟಕ ಪ್ರದರ್ಶನದಲ್ಲಿ ಮುಖ್ಯ ಪಾತ್ರದಲ್ಲಿ ಸಿನೆಮಾ ನಟ ಹಾಗೂ ರಂಗಕರ್ಮಿ ಮುಖ್ಯಮಂತ್ರಿ ಚಂದ್ರು ಭಾಗವಹಿಸುತ್ತಿರುವುದು ವಿಶೇಷವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ