ಲೋಕಸಭೆ ಚುನಾವಣೆ: ಕಾಂಗ್ರೆಸ್ಸಿನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕರ್ನಾಟಕದಿಂದ 7 ಅಭ್ಯರ್ಥಿಗಳಿಗೆ ಟಿಕೆಟ್‌…!

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದಿಂದ 7, ಕೇರಳದ 15, ತೆಲಂಗಾಣದ 4, ಛತ್ತೀಸ್​ಗಡದ 6, ಮೇಘಾಲಯದ 2, ನಾಗಲ್ಯಾಂಡ್, ಸಿಕ್ಕಿಂ​ ಹಾಗೂ ತ್ರಿಪುರಾದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 39 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಶಿ ತರೂರ್​ ತಿರುವನಂತಪುರಂನಿಂದ ಟಿಕೆಟ್ ಪಡೆದಿದ್ದಾರೆ.

ಕರ್ನಾಟಕದ 6 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಲಾಗಿದೆ. ವಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ, ತುಮಕೂರಿನಿಂದ ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇಗೌಡ (ಸ್ಟಾರ್ ಚಂದ್ರು), ಹಾಸನದಿಂದ ಶ್ರೇಯಸ್ ಪಟೇಲ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ. ಸುರೇಶ, ವಿಜಯಪುರದಿಂದ ಎಚ್​.ಆರ್.​ ಅಲಗೂರ ಹಾಗೂ ಹಾವೇರಿಯಿಂದ  ಆನಂದ ಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.ಚಿತ್ರದುರ್ಗದಿಂದ ಬಿಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರಿ ಕ್ಷೇತ್ರದಿಂದ ಜಯಪ್ರಕಾಶ್ ಹೆಗ್ಡೆ ಅವರ ಹೆಸರನ್ನು ಕಾಯ್ದಿರಿಸಲಾಗಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ.

ತೆಲಂಗಾಣದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಹೀರಾಬಾದ್ ಕ್ಷೇತ್ರದಿಂದ ಸುರೇಶಕುಮಾರ ಶೆಟ್ಕರ್, ಚೇವೆಲ್ಲಾದಿಂದ ಸುನೀತಾ ಮಹೇಂದರ ರೆಡ್ಡಿ, ನಲ್ಗೊಂಡ- ಕುಂದೂರು ರಘುವೀರ, ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ ರಿಸರ್ವ್‌ )- ಪೋರಿಕ ಬಲರಾಯ ನಾಯಕ್​ ಅವರಿಗೆ ಟಿಕೆಟ್​ ನೀಡಲಾಗಿದೆ.

ಪ್ರಮುಖ ಸುದ್ದಿ :-   ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ ಸಾವಿತ್ರಿ ಜಿಂದಾಲ್‌, ಇಬ್ಬರು ಸ್ವತಂತ್ರ ಅಭ್ಯರ್ಥಿಗಳು

ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
ವಯನಾಡ್ : ರಾಹುಲ್ ಗಾಂಧಿ
ಕಾಸರಗೋಡು : ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು : ಕೆ ಸುಧಾಕರನ್
ವಡಕರ : ಶಫಿ ಪರಂಬಿಲ್
ಕೋಝಿಕ್ಕೋಡ್ : ಎಂಕೆ ರಾಘವನ್
ಪಾಲಕ್ಕಾಡ್ : ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) : ರೆಮ್ಯಾ ಹರಿದಾಸ್
ತ್ರಿಶೂರ್ : ಕೆ ಮರಳೀಧರನ್
ಚಾಲಕ್ಕುಡಿ : ಬೆನ್ನಿ ಬಹನ್ನಾನ್
ಎರ್ನಾಕುಲಂ : ಹಿಬಿ ಇಡೆನ್
ಇಡುಕ್ಕಿ : ಡೀನ್ ಕುರಿಯಾಕೋಸ್
ಮಾವೇಲಿಕರ (ಕೇರಳ): ಕೋಡಿಕುನ್ನಿಲ್ ಸುರೇಶ
ಪಟ್ಟಣಂತಿಟ್ಟ: ಆ್ಯಂಟೋ ಆ್ಯಂಟೋನಿ
ಅತ್ತಿಂಗಲ್ : ಅಡೂರ್ ಪ್ರಕಾಶ
ತಿರುವನಂತಪುರಂ : ಶಶಿ ತರೂರ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement