ರಾಜ್ಯಸಭೆಗೆ ಇನ್ಫೊಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ನಾಮನಿರ್ದೇಶನ

ಬೆಂಗಳೂರು: ಇನ್ಫೊಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ.
ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಬಲ ಬಂದಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ’ ಎಂದು ಮೋದಿ ಟ್ವೀಟ್‌ನಲ್ಲಿ ಬರೆದಿದ್ದಾರೆ.
ಕಲೆ, ಸಾಹಿತ್ಯ, ವಿಜ್ಞಾನ ಮತ್ತು ಸಾಮಾಜಿಕ ಸೇವೆಗಳಿಗೆ ನೀಡಿದ ಕೊಡುಗೆಗಳಿಗಾಗಿ ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಮೇಲ್ಮನೆಗೆ 12 ಸದಸ್ಯರನ್ನು ನಾಮನಿರ್ದೇಶನ ಮಾಡುತ್ತಾರೆ. ಸುಧಾಮೂರ್ತಿ ಅವರ ಪತಿ ನಾರಾಯಣ ಮೂರ್ತಿ ಅವರು ಐಟಿ ದಿಗ್ಗಜ ಇನ್ಫೋಸಿಸ್‌ನ ಸಂಸ್ಥಾಪಕರು. ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಅವರು ಸುಧಾಮೂರ್ತಿ ಅಳಿಯ. ಭಾರತದಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವಕ್ಕೆ ಅವರು ಕಳೆದ ವರ್ಷ ಭಾಜನರಾಗಿದ್ದಾರೆ. ಅವರು 2006 ರಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement