ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

ಬೆಂಗಳೂರು : ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಾಗಿ ಎಲ್ಲ ರೀತಿಯ ಬೈಕ್‌ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.
ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್ ಅವರು ಮಾರ್ಚ್ 6 ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸಾರಿಗೆಗಾಗಿ ಹಾಗೂ ಸ್ವಯಂ ಉದ್ಯೋಗಾವಕಾಶ ಕೊಡುವ ಉದ್ದೇಶದಿಂದ 2021ರಲ್ಲಿ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ ಜಾರಿ ಮಾಡಲಾಗಿತ್ತು. ಈಗಾಗಲೇ ಓಲಾ, ಉಬರ್, ರ‍್ಯಾಪಿಡೋದಿಂದ ಬೈಕ್ ಸೇವೆ ಚಾಲನೆಯಲ್ಲಿತ್ತು.
ಆದರೆ ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದ್ವಿಚಕ್ರ ವಾಹನ ಸಾರಿಗೆ ಸೇವೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ದೆ. ದ್ವಿಚಕ್ರ ವಾಹನ ಬೈಕ್ ಬಾಡಿಗೆ ಮಹಿಳಾ ಪ್ರಯಾಣಿಕರಿಗೆ ಸುರಕ್ಷಿತವಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನೀತಿಯನ್ನು ಜಾರಿಗೊಳಿಸಿದ್ದ ಮೊದಲ ರಾಜ್ಯವಾಗಿತ್ತು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

2.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement