ಔರಾದ್ ಬಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ

ಬೀದರ : ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಆಂಧ್ರಪ್ರದೇಶದಿಂದ ಕರ್ನಾಟಕದ ಮೂಲಕ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15.50ಕೋಟಿ ರೂ. ಮೌಲ್ಯದ 1596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಸಾಗಿಸುವಾಗ ಔರಾದಿನ ವನಮಾರಪಳ್ಳಿ ಚೆಕ್‍ಪೋಸ್ಟ್‌ ನಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ.
ಬೀದರ್ ಹಾಗೂ ಎನ್‍ಸಿಬಿ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸುಮಾರು 15.50 ಕೋಟಿ ಮೌಲ್ಯದ 1596 ಕೆಜಿ ಗಾಂಜಾ ಸೀಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಎನ್‌ಸಿಬಿ ಮತ್ತು ಜಿಲ್ಲಾ ಪೊಲೀಸರ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಗಾಂಜಾ ವಶಪಡಿಸಿಕೊಂಡಿದೆ.
ಹುಮನಾಬಾದ್ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಈ ಸಂಬಂದ ನಾರ್ಕೊಟಿಕ್ ಕ್ರೈಮ್ ಬ್ಯುರೊ (ಎನ್‍ಸಿಬಿ) ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರ ಪ್ರಮುಖ ಆರೋಪಿ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಬಂಧಿತ ಆರೋಪಿಗಳು ಈ ಹಿಂದೆಯೂ ಅಕ್ರಮ ಗಾಂಜಾ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಎನ್ನಲಾಗಿದೆ.

ಪ್ರಮುಖ ಸುದ್ದಿ :-   ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement