ಮಂಗಳೂರು: ಸುಮಲತಾ ಅವರು ನಮ್ಮ ಅಮ್ಮ, ಹೆತ್ತ ತಾಯಿಯನ್ನು ಎಂದಾದರೂ ಬಿಟ್ಟುಕೊಡಲಿಕ್ಕೆ ಆಗುತ್ತದೆಯೇ ಎಂದು ನಟ ದರ್ಶನ್ ಹೇಳಿದ್ದು, ಈ ಮೂಲಕ ಈ ಸಲ ಕೂಡ ಲೋಕಸಭೆ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ ಪರ ಪ್ರಚಾರ ನಡೆಸುವ ಸುಳಿವು ನೀಡಿದ್ದಾರೆ.
ಅವರು ಭಾನುವಾರ ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಮೊನ್ನೆಯವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ. ಈಗ ಅವರ ಕೈಬಿಡಲಿಕ್ಕೆ ಆಗುತ್ತದೆಯೇ..? ನಿಮ್ಮ ಮನೆಯಲ್ಲಿ ನಿಮ್ಮ ತಾಯಿಯನ್ನು ಬಿಟ್ಟು ಬಿಡುತ್ತೀರಾ, ಸುಮಲತಾ ಅಮ್ಮ ಸಹ ನನಗೆ ಅಮ್ಮನೇ. ಬೇರೆಯವರಿಗಾಗಿ ಅಮ್ಮನನ್ನು ಬಿಡಲಿಕ್ಕೆ ಆಗುತ್ತಾ ಎಂದು ಹೇಳಿದ್ದಾರೆ.
ಕುತ್ತಾರು ಕೊರಗಜ್ಜ ಕ್ಷೇತ್ರದ ಮಹಿಮೆ ಬಗ್ಗೆ ಎಲ್ಲರೂ ಹೇಳುತ್ತಿದ್ದರು. ಅದಕ್ಕೆ ಒಂದು ಬಾರಿ ಹೋಗಿ ಕೊರಗಜ್ಜನಲ್ಲಿ ಪ್ರಾರ್ಥನೆ ಮಾಡಿಕೊಳ್ಳಲು ಬಂದಿದ್ದೇನೆ, ಇದಕ್ಕೆ ಬೇರೆ ಯಾವುದೇ ಕಾರಣವಿಲ್ಲ ಎಂದು ಹೇಳಿದರು. ದರ್ಶನ್ ಅವರಿಗೆ ನಟ ಚಿಕ್ಕಣ್ಣ ಹಾಗು ಯಶಸ್ ಸೂರ್ಯ ಸಾಥ್ ನೀಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ