ಸಂವಿಧಾನ ತಿದ್ದುಪಡಿ ಹೇಳಿಕೆ ಸಂಸದ ಅನಂತರಕುಮಾರ ಹೆಗಡೆ ವೈಯಕ್ತಿಕ ಅಭಿಪ್ರಾಯ, ಇದು ಪಕ್ಷದ ನಿಲುವಲ್ಲ: ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂಬ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಹೇಳಿಕೆಗೆ ಬಿಜೆಪಿ ಸ್ಪಷ್ಟನೆ ನೀಡಿದ್ದು, ಅದು ಸಂಸದ ಅನಂತಕುಮಾರ ಹೆಗಡೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆಯೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ಸ್ಪಷ್ಟ ಪಡಿಸಿದೆ.
ಈ ಸಂಬಂಧ ಎಕ್ಸ್ ನಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ ಅವರು, ಕಾಂಗ್ರೆಸ್​​ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ ಎಂದು ಹೇಳಿದ್ದರು.

ಕಾಂಗ್ರೆಸ್ಸಿನವರು ಸಂವಿಧಾನದ  ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲವೂ ಬದಲಾಗಬೇಕಿದ್ದರೆ ಬಹುಮತ ಇಲ್ಲದೆ ಆಗುವುದಿಲ್ಲ.ಇದು ಸಾಧ್ಯವಾಗಬೇಕಾದರೆ ಲೋಕಸಭೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲಬೇಕು ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ಈ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತವಡಿಸುತ್ತಿದ್ದಂತೆಯೇ ಈ ಕುರಿತು ಕರ್ನಾಟಕ ಬಿಜೆಪಿ ಸ್ಪಷ್ಟನೆ ನೀಡಿದೆ. ಹಾಗೂ ಇದು ಅನಂತಕುಮಾರ ಹೆಗಡೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಇದು ಪಕ್ಷದ ಅಭಿಪ್ರಾಯವಲ್ಲ ಎಂದು ಹೇಳಿದೆ. ಬಿಜೆಪಿಯು ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಮತ್ತು ಅನಂತಕುಮಾರ ಹೆಗಡೆಯವರ ಹೇಳಿಕೆಗೆ ಸಂಬಂಧಿಸಿದಂತೆ ವಿವರಣೆ ಕೇಳುತ್ತೇವೆ ಎಂದು ಟ್ವೀಟ್ ನಲ್ಲಿ ತಿಳಿಸಿದೆ.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement