ಹರಿಯಾಣದಲ್ಲಿ ಬಿಜೆಪಿಗೆ ಹಿನ್ನಡೆ : ಹಿಸ್ಸಾರ್ ಸಂಸದ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಹರ್ಯಾಣದ ಬಿಜೆಪಿಯ ಸಂಸದ ಬ್ರಿಜೇಂದ್ರ ಸಿಂಗ್ ಭಾನುವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ.
ಬಲವಾದ ರಾಜಕೀಯ ಕಾರಣಗಳಿಗಾಗಿಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ. “ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು X ನಲ್ಲಿ ಬರೆದಿದ್ದಾರೆ.

ಬಿಜೇಂದ್ರ ಸಿಂಗ್ ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಅವರ ಜೊತೆಗೆ ಹಿರಿಯ ಕಾಂಗ್ರೆಸ್ ನಾಯಕರಾದ ಅಜಯ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ ಬಬಾರಿಯಾ ಉಪಸ್ಥಿತರಿದ್ದರು.
ಅಕ್ಟೋಬರ್ 2 ರಂದು ಜಿಂದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಬಗ್ಗೆ ಪ್ರಸ್ತಾಪಿಸಲಾಯಿತು. ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಅದು ಕೂಡ (ಬಿಜೆಪಿ ತೊರೆಯಲು) ಒಂದು ಕಾರಣ” ಎಂದು ಸಿಂಗ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನೂಪುರ್ ಶರ್ಮಾ ಸೇರಿದಂತೆ ಹಲವು ಹಿಂದೂ ನಾಯಕರ ಹತ್ಯೆಗೆ ಸಂಚು: ಮೌಲ್ವಿ ಬಂಧನ

ಬ್ರಿಜೇಂದ್ರ ಸಿಂಗ್ ಯಾರು?
ಬ್ರಿಜೇಂದ್ರ ಸಿಂಗ್ ಹರಿಯಾಣದ ಹಿಸಾರ್‌ ಕ್ಷೇತ್ರದ ಸಂಸದರಾಗಿದ್ದಾರೆ. ಅವರು ಅನೇಕ ಸಂಸದೀಯ ಸಮಿತಿಗಳ ಸದಸ್ಯರೂ ಆಗಿದ್ದಾರೆ.ಬ್ರಿಜೇಂದ್ರ ಸಿಂಗ್ ಅವರು ಭಾರತೀಯ ಆಡಳಿತ ಸೇವೆ (IAS) ಮಾಜಿ ಅಧಿಕಾರಿಯಾಗಿದ್ದು, ಅವರು 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ಸ್ವಯಂ ನಿವೃತ್ತಿ ಪಡೆದಿದ್ದರು.
1998 ರಲ್ಲಿ, ಅವರು ಐಎಎಸ್‌ ಪರೀಕ್ಷೆಯಲ್ಲಿ 9 ನೇ ರ್ಯಾಂಕ್ ಪಡೆದರು. ಬ್ರಿಜೇಂದ್ರ ಸಿಂಗ್ ಜೆಎನ್‌ಯುನಿಂದ ಆಧುನಿಕ ಇತಿಹಾಸದಲ್ಲಿ ಎಂಎ ಪದವಿ ಪಡೆದಿದ್ದರು. ಇವರು ಹರಿಯಾಣದ ಜಿಂದ್‌ ಮೂಲದವರು. ಬ್ರಿಜೇಂದ್ರ ಸಿಂಗ್ ಅವರು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಬಿರೇಂದರ ಸಿಂಗ್ ಅವರ ಪುತ್ರ. ಅವರು ಜಾಟ್ ಸಮುದಾಯದ ಐಕಾನ್ ಆದ ಛೋಟು ರಾಮ ಅವರ ಮರಿ ಮೊಮ್ಮಗ.

ಬ್ರಿಜೇಂದ್ರ ಸಿಂಗ್ ಅವರು 2019 ರಲ್ಲಿ ಚುನಾವಣಾ ಪಾದಾರ್ಪಣೆ ಮಾಡಿದರು. ಬಿಜೇಂದ್ರ ಸಿಂಗ್ ಅವರು ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್‌ನಲ್ಲಿದ್ದ ಭವ್ಯಾ ಬಿಷ್ಣೋಯ್ ಅವರನ್ನು ಸೋಲಿಸಿದ್ದರು.
ಕಳೆದ ವರ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ ಶರಣ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಿಗೆ ಬ್ರಿಜೇಂದ್ರ ಸಿಂಗ್ ಸಾರ್ವಜನಿಕವಾಗಿ ಬೆಂಬಲ ನೀಡಿದ್ದರು.
2022 ರಲ್ಲಿ, ಬ್ರಿಜೇಂದ್ರ ಸಿಂಗ್ ಆಮ್ ಆದ್ಮಿ ಪಕ್ಷವನ್ನು ಸೇರಲು ಯೋಚಿಸುತ್ತಿದ್ದಾರೆ ಎಂಬ ಊಹಾಪೋಹವಿತ್ತು. ಆದರೆ, ನಂತರ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷ ಸೇರುವ ಯೋಚನೆ ಇಲ್ಲ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement