ಕರ್ನಾಟಕದಲ್ಲಿ ಕಲರ್‌ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ ; ನಿಯಮ ಮೀರಿದ್ರೆ ಜೈಲು-ದಂಡ

ಬೆಂಗಳೂರು : ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದೇ ಇರುವ ಕಾಟನ್ ಕ್ಯಾಂಡಿ ಮಾರಬಹುದು ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಗೋಬಿ ಮಂಚೂರಿ ನಿಷೇಧಿಸಿಲ್ಲ. ಆದರೆ ಅದಕ್ಕೂ ಕೃತಕ ಬಣ್ಣ ಬಳಸುವಂತಿಲ್ಲ. ಬಳಸಿದ್ದು ಗೊತ್ತಾದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ನಿಷೇಧಿಸಲಾಗಿದೆ. ಅಲ್ಲದೆ, ಗೋಬಿ ಮಂಚೂರಿಗೆ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕಲರ್‌ ಕಾಟನ್‌ ಕ್ಯಾಂಡಿ ಮಾರಾಟ ಮಾಡಿದರೆ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಎಚ್ಚರಿಕೆ ನೀಡಿದರು.

ಪ್ರಮುಖ ಸುದ್ದಿ :-   ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಕಲರ್ ಕಾಟನ್ ಕ್ಯಾಂಡಿಯಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳಿವೆ. ಅದನ್ನು ನಿಷೇಧ ಮಾಡಲಾಗುತ್ತದೆ. ಆದರೆ ಬಣ್ಣ ಬಳಸದೆ ತಯಾರಿಸುವ ಕಾಟನ್ ಕ್ಯಾಂಡಿಗೆ ಅವಕಾಶವಿದೆ. ಪ್ರಸಿದ್ಧ ಖಾದ್ಯ ಗೋಬಿ ಮಂಚೂರಿಯು ಸಸ್ಯಾಹಾರಿ ಪದಾರ್ಥವಾದ ಕಾರಣ ಅದನ್ನು ನಿಷೇಧ ಮಾಡುವುದಿಲ್ಲ. ಆದರೆ ಅದಕ್ಕೆ ಕೃತಕ ಬಣ್ಣ ಬಳಸುವಂತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ 171 ಗೋಬಿ ಮಂಚೂರಿಯನ್ ಮಾದರಿ ಸಂಗ್ರಹ ಮಾಡಲಾಗಿದೆ. ಅದರಲ್ಲಿ 107 ಸ್ಯಾಂಪಲ್ ನಲ್ಲಿ ಕೃತಕ ಬಣ್ಣ ಪತ್ತೆಯಾಗಿದೆ. ಗೋಬಿ ಮಂಚೂರಿಯನ್ ನಲ್ಲಿ ಟಾರ್ ಟ್ರಾಸೈನ್, ಸಮ್ ಸೆಟ್ ಯೆಲ್ಲೋ ಮತ್ತು ಕಾರ್ಮಿಸನ್ ಬಳಕೆ ಮಾಡಲಾಗಿದೆ ಎಂದರು.
ಹೀಗಾಗಿ ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಕೆ ಮಾಡುವಂತಿಲ್ಲ ಎಂದು ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದರು.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement