ಬ್ಯಾಡಗಿ : ಮೆಣಸಿನಕಾಯಿ ದರ ಕುಸಿತ ; ರೈತರಿಂದ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಹಾವೇರಿ : ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ದರ ಕುಸಿತದ ನಂತರ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಮಾರುಕಟ್ಟೆ ಆಡಳಿತ ಕಚೇರಿಗೆ ಕಲ್ಲುತೂರಿ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಬ್ಯಾಡಗಿ ಒಣ ಮೆಣಸಿನಕಾಯಿ ಮಾರುಕಟ್ಟೆ ಅಂತಾರಾಷ್ಟ್ರೀಯ ಮಟ್ಟದ ಮಾರುಕಟ್ಟೆಯಾಗಿದೆ. ಪ್ರತಿ ಕ್ವಿಂಟಲ್ ಮೆಣಸಿನಕಾಯಿಗೆ ಕಳೆದ ವಾರ 20 ಸಾವಿರ ರೂ. ದರ ನಿಗದಿಯಾಗಿತ್ತು. ಆದರೆ ಈ ವಾರ 12 ಸಾವಿರ ರೂ.ಗೆ ಇಳಿಕೆಯಾಗಿದೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಎಪಿಎಂಸಿ ಕಚೇರಿ ಮುಂದೆ ಇರುವ ಆಡಳಿತ ಕಚೇರಿಗೆ ಕಲ್ಲು ತೂರಿದ್ದಾರೆ ಹಾಗೂ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಲಾಗಿದೆ. ಎಪಿಎಂಸಿಗೆ ಸಂಬಂಧಿಸಿದ ಕಾರುಗಳು, ಅಗ್ನಿಶಾಮಕ ದಳದ ವಾಹನ ಹಾಗೂ ಹಲವು ಬೈಕ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಆಸ್ತಿ-ಪಾಸ್ತಿಗಳಿಗೆ ಹಾನಿಯಾದ ಬೆನ್ನಲ್ಲಿಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ಆಂಧಪ್ರದೇಶ, ತೆಲಂಗಾಣದಿಂದಲೂ ರೈತರು ಬ್ಯಾಡಗಿ ಎಂಪಿಎಂಸಿ ಮಾರುಕಟ್ಟೆಗೆ ಸೋಮವಾರ ಮೆಣಸಿನಕಾಯಿ ತಂದಿದ್ದರು ಎಂದು ಹೇಳಲಾಗಿದೆ. ಬ್ಯಾಡಗಿ ಮೆಣಸಿನಕಾಯಿ ಸರಾಸರಿ ದರದಲ್ಲಿ ದರ ಕುಸಿತವಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಬ್ಯಾಡಗಿ ಎಂಪಿಎಂಸಿ ಕಚೇರಿಯತ್ತ ನುಗ್ಗಿ ದಾಂಧಲೆ ನಡೆಸಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೇಲೆಯೂ ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದಾರೆ. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ. ರೈತರ ಪ್ರತಿಭಟನೆ ತೀವ್ರವಾಗಿದ್ದರಿಂದ ಪೊಲೀಸ್ ಇಲಾಖೆ ಜಿಲ್ಲಾ ಕೇಂದ್ರ ಹಾವೇರಿ ಹಾಗೂ ಇತರೆ ತಾಲೂಕುಗಳಿಂದ ಹೆಚ್ಚಿವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಂಡಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರಮುಖ ಸುದ್ದಿ :-   ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯ ಪುತ್ರಿಗೆ ಉದ್ಯೋಗ ಕೊಡಿಸಿದ ಎಚ್‌ಡಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement