ಈಜು ಕಲಿಯಲು ಹೋದಾಗ ದುರ್ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಇಬ್ಬರು ಮಕ್ಕಳ ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಕೃಷಿ ಹೊಂಡದ ನೀರಿನಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಕಲ್ಲಪ್ಪ ಬಸಪ್ಪ ಗಾಣಿಗೇರ (36) ಮತ್ತು ಮಕ್ಕಳಾದ ಮನೋಜ ಗಾಣಿಗೇರ (11) ಮತ್ತು ಮದನ ಗಾಣಿಗೇರ (9) ಎಂದು ಗುರುತಿಸಲಾಗಿದೆ. ಬೇರೆಯವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಕಲ್ಲಪ್ಪ ಗಾಣಿಗೇರ ಅವರು ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಮಧ್ಯಾಹ್ನದ ಸುಮಾರಿಗೆ ಈಜಲು ಹೋದ ಸಂದರ್ಭದಲ್ಲಿ ಈ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement