5, 8, 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ; ಪರೀಕ್ಷೆ ಮುಂದೂಡಿಕೆ

ನವದೆಹಲಿ : 5, 8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.
5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರುಪ್ಸ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ ಮಿಥಾಲ್ ಅವರನ್ನೊಳಗೊಂಡ ಪೀಠ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ ಎಂದು ಲೈವ್‌ ಲಾ ವರದಿ ಮಾಡಿದೆ.
5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರೀಕ್ಷೆ ಮುಂದೂಡಲಾಗಿದೆ. ಮುಂದಿನ ಆದೇಶದ ವರೆಗೆ ಮುಂದೂಡಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

5, 8, 9 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 12) ಅಂಗೀಕರಿಸಿದೆ. ಈಗಾಗಲೇ 11 ನೇ ತರಗತಿಯ ಪರೀಕ್ಷೆಗಳು ಮುಗಿದಿದೆ. ರಾಜ್ಯ ಮಂಡಳಿಗೆ ಸಂಯೋಜಿತವಾಗಿರುವ ಶಾಲೆಗಳಲ್ಲಿ 5, 8 ಮತ್ತು 9 ನೇ ತರಗತಿಗಳಿಗೆ ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಪೀಠವು ಈ ವಿಷಯವನ್ನು ಅಂತಿಮ ವಿಚಾರಣೆಗೆ ಕೈಗೆತ್ತಿಕೊಂಡಿತು ಮತ್ತು ಮಾರ್ಚ್ 7 ರಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಮತ್ತು ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.
5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement