ಶಿವಮೊಗ್ಗದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಎಂದು ಒತ್ತಡ ಬರ್ತಿದೆ ಎಂದ ಈಶ್ವರಪ್ಪ ಈ ಬಗ್ಗೆ ಹೇಳಿದ್ದೇನು..?

ಶಿವಮೊಗ್ಗ : ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ​ಅನ್ನು ಪುತ್ರ ಕಾಂತೇಶ ಅವರಿಗೆ ಕೊಡಿಸಲು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಈಶ್ವರಪ್ಪ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್​ ಹಾವೇರಿ ಕ್ಷೇತ್ರದಲ್ಲಿ ಟಿಕೆಟ್​ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಇದರ ಬೆನ್ನಲ್ಲೇ ಈಶ್ವರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಪುತ್ರನಿಗೆ ಟಿಕೆಟ್ ಕೈತಪ್ಪಿದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರನಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ಮಾಧ್ಯಮದವರ ಮುಂದೆ ಮಾತನಾಡಿದ ಅವರು, ನಿಮಗೆ ಅನ್ಯಾಯವಾಗಿದೆ, ಹೀಗಾಗಿ ಶಿವಮೊಗ್ಗದಿಂದ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹಲವು ಕಾರ್ಯಕರ್ತರು, ಹಿತೈಷಿಗಳು ಹೇಳುತ್ತಿರುವುದು ನಿಜ. ಬೆಂಬಲಿಗರಿಂದ ಈ ಬಗ್ಗೆ ಒತ್ತಡ ಬರುತ್ತಿದೆ. ಹಿತೈಷಿಗಳು ಜೊತೆ, ಬೆಂಬಲಿಗರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ. ನಾಡಿದ್ದು ನನ್ನ ಬೆಂಬಲಿಗರು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ಅಲ್ಲಿ ಯಾವ ಅಭಿಪ್ರಾಯ ಬರುತ್ತದೆಯೋ ಅದರ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ….ನೋಡೋಣ ಎಂದು ಕೆಎಸ್‌ ಈಶ್ವರಪ್ಪ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ದ್ವಿತೀಯ ಪಿಯು ಲಿಖಿತ ಪರೀಕ್ಷೆಯ ಅವಧಿ ಕಡಿತ

ಭಾರತೀಯ ಜನತಾ ಪಾರ್ಟಿಯು ಸಂಸ್ಕಾರ ಕಲಿಸಿಕೊಟ್ಟಿದೆ. ನಾಲ್ಕು ಗೋಡೆ ನಡುವೆ ಕುಳಿತು ತೀರ್ಮಾನ ಮಾಡಬೇಕು ಎಂದು ಹೇಳಿಕೊಟ್ಟಿದೆ. ಅಭಿಮಾನಿಗಳು ಹಾಗೂ ಬೆಂಬಲಿಗರು ಸಭೆ ಕರೆದಿದ್ದಾರೆ. ಅಲ್ಲಿ ಯಾವ ಅಭಿಪ್ರಾಯ ಬರುತ್ತದೆಯೋ ನೋಡೋಣ.. ನಾನು ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸಭೆಯಲ್ಲಿ ಯಾವ ರೀತಿ ಅಭಿಪ್ರಾಯ ಬರುತ್ತದೆಯೋ…ನೋಡೋಣ ಎಂದರು.

ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಕೇವಲ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸವೂ ಇದರ ಹಿಂದೆ ಇದೆ ಎಂದರು.
ರಾಜ್ಯದ ಉಪ ಮುಖ್ಯಮಂತ್ರಿ ತನಕ ಬಿಜೆಪಿ ಅವಕಾಶ ಕೊಟ್ಟಿದೆ. ವರಿಷ್ಠರು ಹೇಳಿದಂತೆ ನಾನು ಶಿಸ್ತಿನ ಸಿಪಾಯಿಯಂತೆ ನಡೆದುಕೊಂಡಿದ್ದೇನೆ ನಾನು ಎಂಪಿ ಆಗಬೇಕು ಎನ್ನುವ ಆಸೆ ಅಲ್ಲ ಪಕ್ಷ ಬೆಳೆಯಬೇಕು. ಪಕ್ಷದಲ್ಲಿರುವ ಅಂಕು ಡೊಂಕು ತಿದ್ದಬೇಕು. ಆ ನಿಟ್ಟಿನಲ್ಲಿ ಚರ್ಚೆ ಆಗಬೇಕಿದೆ ಎಂದರು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement