ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಳ್ಳಾರಿಯಲ್ಲಿ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದ ಎನ್‌ಐಎ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಒಬ್ಬ ಶಂಕಿತ ಆರೋಪಿಯನ್ನು ಬುಧವಾರ ಬಂಧಿಸಿದೆ ಎಂದು ವರದಿಗಳು ತಿಳಿಸಿವೆ.
ಬುಧವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ಶಂಕಿತ ಆರೋಪಿ ಶಬ್ಬೀರ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ವ್ಯಕ್ತಿಯು ಸ್ಫೋಟದ ದಿನದಂದು ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳಲ್ಲಿ ಕಂಡುಬಂದಂತೆ ಕೆಫೆಯಲ್ಲಿ ಬ್ಯಾಗ್ ಇಟ್ಟು ಹೋದ ಶಂಕಿತನ ಸಹಚರ ಎಂದು ನಂಬಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ. ಆತನನ್ನು ಬಳ್ಳಾರಿಯ ಕೌಲ್ ಬಜಾರ್ ಬಳಿ ಬುಧವಾರ ಬೆಳಿಗ್ಗೆ ಎನ್‌ಐಎ ಬಂಧಿಸಿದೆ. ಸ್ಫೋಟದ ಬಗ್ಗೆ ಶಬ್ಬೀರ್‌ಗೆ ಮಾಹಿತಿ ಇದ್ದು, ಆತನ ಇತ್ತೀಚಿನ ಪ್ರಯಾಣ ಇತಿಹಾಸದ ಆಧಾರದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟ ಪ್ರಕರಣದ ಜಂಟಿ ತನಿಖೆ ನಡೆಸುತ್ತಿರುವ ಎನ್‌ಐಎ ಮತ್ತು ಕೇಂದ್ರ ಅಪರಾಧ ದಳವು ಕಳೆದ ವಾರ ಬಳ್ಳಾರಿಯ ಕೌಲ್ ಬಜಾರ್‌ನಲ್ಲಿ ಬಟ್ಟೆ ವ್ಯಾಪಾರಿ ಹಾಗೂ ನಿಷೇಧಿತ ಪಿಎಫ್‌ಐ ಸದಸ್ಯನನ್ನು ಬಂಧಿಸಿತ್ತು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಮಾರ್ಚ್ 1ರಂದು ವೈಟ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಐಇಡಿ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದರು. ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಎನ್‌ಐಎ ಮಾರ್ಚ್ 3 ರಂದು ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತ್ತು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದ ಎಂದು ನಂಬಲಾದ ಪ್ರಮುಖ ಶಂಕಿತನನ್ನು ಗುರುತಿಸಲು ಸಾರ್ವಜನಿಕರ ಸಹಾಯವನ್ನು ಕೋರಿದೆ.

ಸ್ಫೋಟ ಸಂಭವಿಸಿದ ರಾತ್ರಿ 9 ಗಂಟೆ ಸುಮಾರಿಗೆ ಮತ್ತೊಂದು ದೃಶ್ಯಾವಳಿಯಲ್ಲಿ ಬಾಂಬ್‌ ಇಟ್ಟಿದ್ದಾನೆ ಎಂದ ನಂಬಲಾದ ಶಂಕಿತ ವ್ಯಕ್ತಿ ಬಸ್ ನಿಲ್ದಾಣದೊಳಗೆ ಶಂಕಿತ ತಿರುಗಾಡುತ್ತಿರುವುದನ್ನು ಗಮನಿಸಲಾಗಿದೆ. ಅದಕ್ಕೂ ಮೊದಲು ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಸುಮಾರು ಒಂದು ಗಂಟೆಯ ನಂತರ ಆತ ಬಸ್‌ ಏರಿದ್ದ.
ತನಿಖಾ ತಂಡದ ಪ್ರಕಾರ, ಘಟನೆಯ ನಂತರ ಶಂಕಿತ ತನ್ನ ಬಟ್ಟೆಗಳನ್ನು ಬದಲಾಯಿಸಿಕೊಂಡು ಬಸ್‌ನಲ್ಲಿ ಬೇರೆ ಬೇರೆ ಸ್ಥಳಗಳಿಗೆ ಪ್ರಯಾಣಿಸಿದ್ದಾನೆ.
ಕಳೆದ ವಾರ ರಾಮೇಶ್ವರಂ ಕೆಫೆಯು ಹೆಚ್ಚಿನ ಭದ್ರತಾ ಕ್ರಮಗಳೊಂದಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಪ್ರವೇಶದ್ವಾರದಲ್ಲಿ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದೆ ಮತ್ತು ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹ್ಯಾಂಡ್‌ಹೆಲ್ಡ್ ಡಿಟೆಕ್ಟರ್‌ಗಳನ್ನು ಬಳಸಿಕೊಂಡು ಸ್ಕ್ರೀನಿಂಗ್‌ಗೆ ಒಳಪಡಿಸಲಾಗುತ್ತದೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement