ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಿಸಲಾಗಿದೆ. ಈ ಐವರು ಸಚಿವರಿಗೆ ಸರ್ಕಾರದ ದಾಖಲೆಗಳು ಹಾಗೂ ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ವಿಪಕ್ಷಗಳು ಮಾಡುವ ಆರೋಪಗಳಿಗೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಈ ಐವರಿಗೆ ಜವಾಬ್ದಾರಿ ನೀಡಲಾಗಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement