ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ

ನವದೆಹಲಿ :  ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್‌ ಪೋಲ್‌ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ.
ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ ಪೋಲ್ ಡೇಟಾ ಪ್ರಕಾರ, ಎನ್‌ಡಿಎ 23 ಸ್ಥಾನಗಳನ್ನು ಪಡೆಯಬಹುದು ಮತ್ತು ಕಾಂಗ್ರೆಸ್‌ 5 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಕರ್ನಾಟಕದಲ್ಲಿ ಎನ್‌ಡಿಎ (NDA) 53%ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಬ್ಲಾಕ್ 42%ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಅಂದಾಜಿಸಿದೆ.

2019 ರಲ್ಲಿ, ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿತ್ತು. ಕಾಂಗ್ರೆಸ್‌, ಜೆಡಿಎಸ್‌ ತಲಾ ಒಂದು ಸ್ಥಾನಗಳಲ್ಲಿ ಜಯಗಳಿಸಿತ್ತು. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಮಲತಾ ಅಂಬರೀಷ ಮಂಡ್ಯದಿಂದ ಜಯಗಳಿಸಿದ್ದರು. ಎನ್‌ಡಿಎ ಈಗ 2019 ರ ತನ್ನ ಯಶಸ್ಸನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ, ಆದರೆ ಪ್ರಸ್ತುತ ರಾಜ್ಯ ಸರ್ಕಾರವನ್ನು ಹೊಂದಿರುವ ಕಾಂಗ್ರೆಸ್ ತಾನೂ ಹೆಚ್ಚಿನ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದೆ.
ಕರ್ನಾಟಕದಲ್ಲಿ ಮುಂಬರುವ ಚುನಾವಣೆಗೆ ಬಿಜೆಪಿಯು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನೇತೃತ್ವದ ಜನತಾದಳ (ಜಾತ್ಯತೀತ) ಜೊತೆ ಮೈತ್ರಿ ಮಾಡಿಕೊಂಡಿದೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ಈಗಾಗಲೇ ಬಿಜೆಪಿ 20 ಕ್ಷೇತ್ರಗಳಿಗೆ ಅಭಯರ್ಥಿಗಳನ್ನು ಘೋಷಿಸಿದೆ. ಎಂಟು ಸಂಸದರಿಗೆ ಟಿಕೆಟ್‌ ಕೈತಪ್ಪಿದೆ. ಇದರ ಮಧ್ಯೆಗೆ ಮಾರ್ಚ್ 15-19 ರವರೆಗೆ ಕರ್ನಾಟಕಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ನಿರೀಕ್ಷೆಯಿದೆ. ಮಾರ್ಚ್ 15 ರಂದು ದೇವನಹಳ್ಳಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಮಾರ್ಚ್ 17 ರಂದು ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ (ಮಾರ್ಚ್ 18) ಮತ್ತು ಕಲಬುರಗಿಯಲ್ಲಿ (ಮಾರ್ಚ್ 19) ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ಇನ್ನೊಂದೆಡೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಏಳು ಅಭ್ಯರ್ಥಿಗಳನ್ನು ಘೋಷಿಸಿದೆ.
ರಾಮೇಶ್ವರಂ ಕೆಫೆ ಸ್ಫೋಟ, ಪಾಕಿಸ್ತಾನದ ಪರ ಘೋಷಣೆಗಳು ಮತ್ತು ಬೆಂಗಳೂರಿನ ನೀರಿನ ಬಿಕ್ಕಟ್ಟಿನಂತಹ ವಿಷಯಗಳ ಸುತ್ತ ರಾಜಕೀಯ ಪಕ್ಷಗಳು ಚರ್ಚೆ ನಡೆಸುವ ಚುನಾವಣೆ ವೇಳೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement