ನವದೆಹಲಿ: ಪಿಟ್‌ಬುಲ್‌ಗಳು ಮತ್ತು ಬುಲ್‌ಡಾಗ್‌ಗಳು ಸೇರಿದಂತೆ 23 ಅಪಾಯಕಾರಿ ನಾಯಿ ತಳಿಗಳ ಆಮದು, ಸಂತಾನೋತ್ಪತ್ತಿ ಮತ್ತು ಮಾರಾಟವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ
ದೇಶದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, ಪಿಟ್‌ಬುಲ್ ಟೆರಿಯರ್, ಅಮೆರಿಕನ್ ಬುಲ್‌ಡಾಗ್, ರೊಟ್‌ವೀಲರ್ ಸೇರಿದಂತೆ ಹಲವಾರು ನಾಯಿ ತಳಿಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಕೇಂದ್ರವು 23 ನಾಯಿ ತಳಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಅವುಗಳ ಸಂತಾನೋತ್ಪತ್ತಿ ಮತ್ತು ಮಾರಾಟವನ್ನು ನಿಷೇಧಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
ಈ ಸಂಬಂಧ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಲಾಗಿದ್ದು, ಅಪಾಯಯಕಾರಿ ತಳಿಯ ನಾಯಿಗಳ ಸಾಕಣೆಯ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವಂತೆ ಸೂಚಿಸಲಾಗಿದೆ. ಜತೆಗೆ ಅಪಾಯಕಾರಿ ತಳಿಯ ಶ್ವಾಸನಗಳ ಆಮದಿನ ಮೇಲೂ ನಿರ್ಬಂಧ ಹೇರಲಾಗಿದೆ.
ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ರವಾನಿಸಿದ್ದು, ನಿಷೇಧವನ್ನು ಜಾರಿಗೊಳಿಸುವಂತೆ ಸೂಚನೆ ನೀಡಿದ್ದಾರೆ.
ನಿಷೇಧಿತ ನಾಯಿ ತಳಿಗಳ ಪಟ್ಟಿ….
ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೆರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೊ, ಅಮೆರಿಕನ್ ಬುಲ್‌ಡಾಗ್, ಬೋರ್‌ಬೋಯಲ್, ಕಂಗಾಲ್, ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಸಪ್‌ರ್‍ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್‌ವೀಲರ್, ಟೆರಿಯರ್‌ಗಳು ರಿಡ್ಜ್‌ಬ್ಯಾಕ್, ವೂಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್, ಮಾಸ್ಕೊ ಗಾರ್ಡ್ , ಕೇನ್ ಕೊರ್ಸೊ ಶ್ವಾನ ತಳಿಗಳನ್ನು ನಿಷೇಧಿಸಲಾಗಿದೆ.
“… ಮಿಶ್ರತಳಿಗಳು ಸೇರಿದಂತೆ ಮೇಲಿನ ನಾಯಿ ತಳಿಗಳನ್ನು ಆಮದು, ತಳಿ, ಸಾಕು ನಾಯಿಗಳಾಗಿ ಮಾರಾಟ ಮಾಡುವುದು ಮತ್ತು ಇತರ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಲಾಗಿದೆ” ಎಂದು ತಜ್ಞರ ಸಮಿತಿಯ ಶಿಫಾರಸುಗಳನ್ನು ಉಲ್ಲೇಖಿಸಿ ಸರ್ಕಾರದ ಪತ್ರದಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ